ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ!

masthmagaa.com:

ರಾಜ್ಯದಲ್ಲಿ ಮತ್ತೆ ವರುಣನ ಕೃಪೆ ಮುಂದುವರೆದಿದೆ. ಈ ಬಾರಿ ಹಿಂಗಾರು ಮಳೆ ಸ್ವಲ್ಪ ಬಿರುಸಾಗಿದ್ದು, ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಜಿಟಿಜಿಟಿ ಮಳೆ ಶುರುವಾಗಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಅತಿಹೆಚ್ಚು 76 ಮಿಲಿ ಮೀಟರ್‌ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಸಾಧಾರಣ ಮಳೆ ಹಾಗೂ ಕೆಲವು ಭಾಗಗಳಲ್ಲಿ ಅಧಿಕ ಮಳೆಯಾಗುವ ಸಾದ್ಯತೆ ಇದೆ. ಕರಾವಳಿ ಜಿಲ್ಲೆಗಳ ಕೆಲವೊಂದು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ನವಂಬರ್‌ 5ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

-masthmagaa.com

Contact Us for Advertisement

Leave a Reply