ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ ನೋಡಿ!

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಅದರಲ್ಲೂ ಪ್ರತಿವರ್ಷದಂತೆ ಈ ಬಾರಿ ಕೂಡ ಮಲೆನಾಡುಹಾಗೂ ಕರಾವಳಿ ಜಿಲ್ಲೆಗಳಲ್ಲಿ ವರುಣ ಬಿಟ್ಟು ಬಿಡದೇ ಸರೀತಿದ್ದಾನೆ. ಕೆಲವು ಕಡೆ ಭೂ ಕುಸಿತ ಕೂಡ ಉಂಟಾಗಿದೆ. ಕರೆಕಟ್ಟೆ ನದಿಗಳೆಲ್ಲಾ ನೀರಿನಿಂದ ತುಂಬಿ ಹರೀತಾ ಇದೆ. ಕೊಡಗಿನ ಹಾರಂಗಿ ಜಿಲಾಶಯ ಭರ್ತಿಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನಾಲ್ಪಾಡು ಎಂಬಲ್ಲಿ ಅತಿಹೆಚ್ಚು 229.5 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳ ಬಹುತೇಕ ಕಡೆ ಸಾಧರಣ ಮಳೆ. ಕೆಲವೊಂದು ಕಡೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳ ಕೆಲವೊಂದು ಕಡೆ ವ್ಯಾಪಕ ಮಳೆ ಮತ್ತು ಉಳಿದ ಕಡೆಯಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

-masthmagaa.com

Contact Us for Advertisement

Leave a Reply