ಮೊರೊಕ್ಕೊ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 2,000ಕ್ಕೆ ಏರಿಕೆ!

masthmagaa.com:

ಉತ್ತರ ಆಫ್ರಿಕಾದ ಮೊರೊಕ್ಕೊದಲ್ಲಿ ಸಂಭವಿಸಿದ್ದ ಪ್ರಬಲ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 2 ಸಾವಿರಕ್ಕೆ ಏರಿಕೆಯಾಗಿದೆ. ಈ ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅಸ್ಪತ್ರೆಗೆ ಸೇರಿಸಲಾಗಿದೆ. ಜೊತೆಗೆ ಅವಶೇಷಗಳ ಅಡಿಯಲ್ಲಿ ಸಿಲುಕಿರೋರ ರಕ್ಷಣೆಗಾಗಿ ಕಾರ್ಯಾಚರಣೆ ನಡೆಸಲಾಗ್ತಿದೆ ಅಂತ ಅಧಿಕಾರಿಗಳು ಹೇಳಿದ್ದಾರೆ. ಇನ್ನು ಈ ಭೀಕರ ಭೂಕಂಪಕ್ಕೆ ನಲುಗಿ ಹೋಗಿರುವ ಮೊರೊಕ್ಕೊದಲ್ಲಿ ಅಲ್ಲಿನ ಸರ್ಕಾರ ಮೂರು ದಿನಗಳ ರಾಷ್ಟ್ರೀಯ ಶೋಕದಿನ ಅನೌನ್ಸ್‌ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಬೇಸರ ವ್ಯಕ್ತಪಡಿಸಿದ್ದು, ಭೂಕಂಪ ಪೀಡಿತ ಮೊರೊಕ್ಕೊಗೆ ಅಗತ್ಯ ನೆರವು ನೀಡಲಾಗುವುದು ಅಂತ ಹೇಳಿದ್ದಾರೆ. ಇತ್ತ ಮೊರೊಕ್ಕೊದಲ್ಲಿರುವ ಭಾರತೀಯ ಪ್ರಜೆಗಳಿಗೆ ಹಾನಿಯಾಗಿರೋ ಬಗ್ಗೆ ವರದಿಯಾಗಿಲ್ಲ ಅಂತ ಮೊರೊಕ್ಕೊದಲ್ಲಿರುವ ಭಾರತೀಯ ರಾಯಭಾರ ಕಚೇರಿ ಹೇಳಿದೆ. ಜೊತೆಗೆ ಅಗತ್ಯವಿರುವ ಯಾವುದೇ ಸಹಾಯಕ್ಕಾಗಿ ನಮ್ಮ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದು ಅಂತ ತಿಳಿಸಿದೆ.

-masthmagaa.com

Contact Us for Advertisement

Leave a Reply