ಜಮ್ಮು ಕಾಶ್ಮೀರದಲ್ಲಿ ಉಗ್ರ ಬೆಂಬಲಿಗರ ಬೆವರಿಳಿಸಿದ ಎನ್​ಐಎ!

masthmagaa.com:

ಜಮ್ಮು ಕಾಶ್ಮೀರದಲ್ಲಿಂದು ಬೆಳ್ ಬೆಳಗ್ಗೆ ಎನ್​ಐಎ ಅಂದ್ರೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಫೀಲ್ಡ್​​ಗೆ ಇಳಿದಿದ್ದಾರೆ. ಭಯೋತ್ಪಾದನೆಗೆ ಹಣಕಾಸಿನ ನೆರವು ಸಂಬಂಧ 14 ಜಿಲ್ಲೆಯ 40 ಸ್ಥಳಗಳಲ್ಲಿ ರೇಡ್ ಮಾಡಿದ್ದಾರೆ. ನಿಷೇಧಿತ ಜಮಾತ್ ಇ ಇಸ್ಲಾಮಿ ಸಂಘಟನೆಯ ನಾಯಕರ ಮನೆಯಲ್ಲೂ ಶೋಧಕಾರ್ಯ ನಡೆಸಲಾಗಿದೆ. ಕಳೆದೊಂದು ತಿಂಗಳಲ್ಲಿ ಎನ್​ಐಎ ಜಮ್ಮು ಕಾಶ್ಮೀರದಲ್ಲಿ ನಡೆಸಿದ 3ನೇ ಕಾರ್ಯಾಚರಣೆ ಇದಾಗಿದೆ. ಜಮ್ಮು ಕಾಶ್ಮೀರ ಪೊಲೀಸರು ಮತ್ತು ಸಿಆರ್​ಪಿಎಫ್ ನೆರವಿನೊಂದಿಗೆ ಈ ದಾಳಿ ನಡೆಸಲಾಗಿದೆ. 2019ರಲ್ಲಿ ಜಮಾತ್ ಇ ಇಸ್ಲಾಮಿ ಸಂಘಟನೆಯನ್ನು ಬ್ಯಾನ್ ಮಾಡಲಾಗಿತ್ತು. ಆದ್ರೂ ಕೂಡ ಇತ್ತೀಚೆಗೆ ಈ ಸಂಘಟನೆಯ ಚಟುವಟಿಕೆಗಳು ಹೆಚ್ಚಿದ್ದರಿಂದ ಕಳೆದ ತಿಂಗಳು ಗೃಹಸಚಿವಾಲಯದಲ್ಲಿ ಉನ್ನತ ಮಟ್ಟದ ಸಭೆ ನಡೆದಿತ್ತು. ಇದ್ರ ಬೆನ್ನಲ್ಲೇ ಜಮ್ಮು ಕಾಶ್ಮೀರದಲ್ಲಿ 11 ಮಂದಿ ಸರ್ಕಾರಿ ಅಧಿಕಾರಿಗಳನ್ನು ಉಗ್ರರ ಜೊತೆ ಲಿಂಕ್ ಹೊಂದಿದ ಆರೋಪದಲ್ಲಿ ಕೆಲಸದಿಂದ ತೆಗೆದು ಹಾಕಲಾಗಿತ್ತು. ಎನ್​ಐಎ ದಾಳಿಗಳನ್ನು ನಡೆಸಿತ್ತು. ಇನ್ನು ಜಮ್ಮು ಕಾಶ್ಮೀರದ ಕುಲ್ಗಾಮ್​​ನಲ್ಲಿ ಪೊಲೀಸರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಇದ್ರಲ್ಲಿ ಓರ್ವ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದು, ಇಬ್ಬರಿಗೆ ಗಾಯಗಳಾಗಿವೆ.

-masthmagaa.com

Contact Us for Advertisement

Leave a Reply