ಮುಂಬೈ: ಬುರ್ಖಾ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಣೆ, ಭುಗಿಲೆದ್ದ ಆಕ್ರೋಶ

masthmagaa.com:

ಮುಂಬೈನ ಕಾಲೇಜ್‌ ಒಂದ್ರಲ್ಲಿ ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಬಂದಿದ್ದಕ್ಕೆ ಅವರನ್ನ ಕ್ಯಾಂಪಸ್‌ ಪ್ರವೇಶಿಸಲು ನಿರ್ಬಂಧಿಸಲಾಗಿತ್ತು. ವಿಷಯ ತಿಳಿದ ಬಳಿಕ ಪೋಷಕರು ವಿದ್ಯಾರ್ಥಿಗಳೊಂದಿಗೆ ಸೇರಿ ಕಾಲೇಜು ಬಳಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗುವ ಮೊದಲು ಕಾಲೇಜಿನ ವಿಶ್ರಾಂತಿ ಕೊಠಡಿಯಲ್ಲಿ ಬುರ್ಖಾ ತೆಗೆಯೋದಕ್ಕೆ ಒಪ್ಪಿಕೊಂಡಿದ್ದಾರೆ. ಆದರೆ ತರಗತಿಯಲ್ಲಿ ಸ್ಕಾರ್ಫ್ ಧರಿಸಲು ಅನುಮತಿ ನೀಡಬೇಕು ಅಂತ ಮನವಿ ಮಾಡಿದ್ದಾರೆ. ಇದಕ್ಕೆ ಕಾಲೇಜು ಆಡಳಿತ ಮಂಡಳಿ ಒಪ್ಪಿಗೆ ಸೂಚಿಸಿದ್ದು, ನಂತರ ಉದ್ವಿಗ್ನತೆ ಶಮನವಾಗಿದೆ.

-masthmagaa.com

Contact Us for Advertisement

Leave a Reply