ಯಡಿಯೂರಪ್ಪ, ನಳಿನ್ ನಡುವೆ ಮುನಿಸಿಲ್ಲ: ಮುರಳೀಧರ್ ರಾವ್

ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಒಂದೇ ಪಕ್ಷ, ಒಂದೇ ನಿಲುವು. ಯಡಿಯೂರಪ್ಪನವರು ದೊಡ್ಡ ನಾಯಕರು ಅವರನ್ನು ಕಡೆಗಣಿಸೋ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದಾರೆ. ಅದೇ ರೀತಿ ಉಳಿದವರು ಕೂಡ ತಮ್ಮ ತಮ್ಮ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ ಅಂತ ಹೇಳಿದ್ದಾರೆ. ಈ ಮೂಲಕ ಉಪಾಧ್ಯಕ್ಷರನ್ನು ನೇಮಿಸಿದ ನಳಿನ್ ಕುಮಾರ್ ಕಟೀಲ್ ಅವರ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿ ಎಲ್ಲಾ 15 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಅಂತ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Contact Us for Advertisement

Leave a Reply