ಮಹಾರಾಷ್ಟ್ರ: ತ್ರಯಂಬಕೇಶ್ವರ ದೇವಾಲಯ ಪ್ರವೇಶಿಸಲು ಪ್ರಯತ್ನಿಸಿದ ಮುಸ್ಲಿಂ ಗುಂಪು

masthmagaa.com:

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಪ್ರಸಿದ್ಧ ತ್ರಯಂಬಕೇಶ್ವರ ದೇವಾಲಯಕ್ಕೆ ಮುಸ್ಲಿಂ ಸಮುದಾಯದ ಗುಂಪೊಂದು ಪ್ರವೇಶಿಸಲು ಪ್ರಯತ್ನಿಸಿರುವ ಘಟನೆ ನಡೆದಿದೆ. ಈ ಗುಂಪು ದೇವಸ್ಥಾನಕ್ಕೆ ʻಚಾದರ್‌ʼ ಅರ್ಪಿಸಲು ಬಂದಿದ್ರು ಎನ್ನಲಾಗಿದೆ. ಈ ವೇಳೆ ಅವರನ್ನ ಒಳಗೆ ಹೋಗದಂತೆ ಭದ್ರತಾ ಸಿಬ್ಬಂದಿ ತಡೆದಿದ್ದಾರೆ ಅಂತ ದೇವಾಲಯದ ಟ್ರಸ್ಟ್‌ ಅಧಿಕಾರಿಗಳು ತಿಳಿಸಿದ್ದಾರೆ. ಐದರಿಂದ ಆರು ಜನ ಹಸಿರು ಸ್ಕಾರ್ಫ್‌ಗಳನ್ನು ಹೊತ್ತು ದೇವಾಲಯಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡ್ತಿದೆ. ಘಟನೆಗೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್‌, ಈ ಕುರಿತು ಎಫ್‌ಐಆರ್‌ ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ. ಅಂದ್ಹಾಗೆ ದೇವಾಲಯದ ಆಡಳಿತದ ಪ್ರಕಾರ, ಶಿವನ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಈ ದೇವಾಲಯಕ್ಕೆ ಹಿಂದೂಗಳಿಗೆ ಮಾತ್ರ ಪ್ರವೇಶಿಸಲು ಅನುಮತಿಸಲಾಗಿದೆ.

-masthmagaa.com

Contact Us for Advertisement

Leave a Reply