ಟಿಪ್ಪು ಪ್ರತಿಮೆ ವಿವಾದ: ಪ್ರತಿಮೆ ನಿರ್ಮಾಣವಾದರೇ ಒಡೆದು ಹಾಕ್ತೀವಿ ಎಂದ ಮುತಾಲಿಕ್

masthmagaa.com

ರಾಜ್ಯದಲ್ಲಿ ನಿನ್ನೆ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನ ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ್ರು. ಇದರ ಬೆನ್ನಲ್ಲೇ ಇದೀಗ ಮೈಸೂರಿನ ಹುಲಿ ಟಿಪ್ಪು ಸುಲ್ತಾನರ ಪ್ರತಿಮೆಯನ್ನ ನಿರ್ಮಿಸೋಕೆ ಅಭಿಮಾನಿಗಳು ಹಾಗೂ ಮುಸ್ಲಿಂ ಸಮುದಾಯ ಮುಂದಾಗಿದೆ. ಮುಸ್ಲಿಂ ಸಮುದಾಯದ ಗರಿಮೆಯನ್ನ ಉಳಿಸೋಕೆ ಮೈಸೂರು ಅಥ್ವಾ ಶ್ರೀರಂಗಪಟ್ಟಣದಲ್ಲಿ ಟಿಪ್ಪು ಸುಲ್ತಾನರ 100 ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗುತ್ತೆ ಅಂತ ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಮೈಸೂರಿನ ರಾಜೀವ್‌ ನಗರದ ಅಲ್‌ ಬದರ್‌ ಮೈದಾನದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ಟಿಪ್ಪು ಉತ್ಸವದಲ್ಲಿ ಈ ಘೋಷಣೆ ಮಾಡಿದ್ದಾರೆ. ಇಸ್ಲಾಂ ಧರ್ಮದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಅವಕಾಶವಿಲ್ಲ. ಇದ್ದಿದ್ರೆ ಮನೆಗೊಂದರಂತೆ ಟಿಪ್ಪು ಪ್ರತಿಮೆ ನಿರ್ಮಾಣ ಆಗ್ತಿದ್ವು. ಟಿಪ್ಪು ಹೆಸರಿಗೆ ಅನೇಕ ಅಪಚಾರಗಳನ್ನ ಮಾಡಲಾಗ್ತಿದೆ. ಸುಳ್ಳು ಕತೆಗಳನ್ನು ಸೃಷ್ಟಿಸಿ ಜನರನ್ನ ತಪ್ಪು ದಾರಿಗೆ ಎಳೆಯಲಾಗ್ತಿದೆ. ಟಿಪ್ಪು ಅಭಿಮಾನಿಗಳು, ನಮ್ಮ ಸಮುದಾಯ ಎಲ್ಲವನ್ನೂ ಮೌನವಾಗಿ ಸಹಿಸುತ್ತಿದೆ. ಕಾಲ ಬಂದಾಗ ಅದಕ್ಕೆ ಸ್ಪಷ್ಟ ಉತ್ತರ ನೀಡ್ತೀವಿ ಅಂತ ಎಚ್ಚರಿಕೆ ನೀಡಿದ್ದಾರೆ. ಇತ್ತ ಮೈಸೂರಿನಲ್ಲಿ ಟಿಪ್ಪು ಪ್ರತಿಮೆ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಒಂದು ವೇಳೆ ನಿರ್ಮಾಣ ಮಾಡಿದ್ರೆ ಬಾಬ್ರಿ ಮಸೀದಿಯಂತೆ ಒಡೆದು ಹಾಕ್ತೀವಿ ಅಂತ ಶ್ರೀ ರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ ಎಚ್ಚರಿಕೆ ನೀಡಿದ್ದಾರೆ.ಇನ್ನೊಂದ್‌ ಕಡೆ ಹುಬ್ಬಳ್ಳಿಯ ಈದ್ಗಾ ಮೈದಾನದಕ್ಕೆ ಸಂಪೂರ್ಣವಾಗಿ ಗೋಮೂತ್ರ ಸಿಂಪಡಿಸಿ ಕನಕದಾಸ ಜಯಂತಿಯನ್ನ ಆಚರಿಸಲಾಗಿದೆ. ಯಾಕಂದ್ರೆ ಅದರ ಹಿಂದಿನ ದಿನ ಮೈದಾನದಲ್ಲಿ ಟಿಪ್ಪು ಜಯಂತಿಯನ್ನ ಆಚರಿಸಲಾಗಿತ್ತು. ಇದು ಕೂಡ ಭಾರಿ ಚರ್ಚೆಗೆ ಕಾರಣವಾಗಿದೆ

-masthmagaa.com

Contact Us for Advertisement

Leave a Reply