ಬಿಜೆಪಿ-ಜೆಡಿಎಸ್‌ ಮೈತ್ರಿ: ಸಾಮೂಹಿಕವಾಗಿ ಜೆಡಿಎಸ್‌ಗೆ ಗುಡ್‌ಬೈ ಹೇಳಿದ ಮುಖಂಡರು!

masthmagaa.com:

ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಘೋಷಿಸಿದ್ದೇ ತಡ ಜೆಡಿಎಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಇದೀಗ ಮೈಸೂರಿನಲ್ಲಿ ಮುಸ್ಲಿಂ ಜೆಡಿಎಸ್‌ ನಾಯಕರು ಜೆಡಿಎಸ್‌ಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಮೈಸೂರು ನಗರದ ಎನ್​ಆರ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಶಾಹಿದ್ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಸಾಮೂಹಿಕವಾಗಿ ಜೆಡಿಎಸ್​ಗೆ ಗುಡ್​ಬೈ ಹೇಳಿದ್ದಾರೆ. ಜಾತ್ಯಾತಿತ ಪಕ್ಷ ಅಂತ ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿದೆವು. ಆದರೆ ಕೋಮುವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿರುವುದು ಸರಿಯಲ್ಲ. ಹೀಗಾಗಿ ಸಾಮೂಹಿಕ ರಾಜೀನಾಮೆ ನೀಡಿದ್ದೇವೆ ಅಂತ ಮುಖಂಡರು ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply