ಬಿಜೆಪಿಯ ಕರ್ನಾಟಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ಕಟೀಲ್‌

masthmagaa.com:

ಬಿಜೆಪಿಯ ಕರ್ನಾಟಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಅಂತ ಬಿಜೆಪಿ ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ್ದು, ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿರುವ ಬಗ್ಗೆ ಬಳ್ಳಾರಿಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸುವ ವೇಳೆ, ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಅಂತ ಮಾತ್ರ ತಿಳಿಸಿದ್ದೇನೆ ಅಷ್ಟೆ. ಆದ್ರೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಿ ಸುದ್ದಿ ಮಾಡಲಾಗ್ತಿದೆ ಅಂತ ಕಟೀಲ್‌ ಕ್ಲಾರಿಟಿ ಕೊಟ್ಟಿದ್ದಾರೆ.

-masthmagaa.com

Contact Us for Advertisement

Leave a Reply