ನನ್ನಮ್ಮ ಸೂಪರ್ ಸ್ಟಾರ್ ಸ್ಪರ್ಧಿ ಸಮನ್ವಿ ರಸ್ತೆ ಅಪಘಾತದಲ್ಲಿ ಸಾವು!

masthmagaa.com:

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ನನ್ನಮ್ಮ ಸೂಪರ್ ಸ್ಟಾರ್ ಶೋನ ಸ್ಪರ್ಧಿ ಸಮನ್ವಿ ಎಂಬ ಆರು ವರ್ಷದ ಬಾಲಕಿ ನಿನ್ನೆ ಬೆಂಗಳೂರಿನ ಕೋಣನಕುಂಟೆ ಬಳಿ ನಡೆದ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಮನ್ವಿ, ತಾಯಿ ನಟಿ ಅಮೃತ ನಾಯ್ಡು ಜೊತೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕೋಣನ ಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆ ತೆರಳುತ್ತಿದ್ದಾಗ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ನಟಿ ಅಮೃತ ನಾಯ್ಡು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಸಮನ್ವಿ ಹರಿಕಥಾ ಗಾಯಕ ಗುರುರಾಜ ನಾಯ್ಡು ಅವರ ಮೊಮ್ಮಗಳು ಕೂಡ ಹೌದು.

ಅಪಘಾತದಲ್ಲಿ ಗಾಯಗೊಂಡಿರುವ ಅಮೃತಾ ನಾಯ್ಡು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಸಮನ್ವಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್‌ಗೆ ರವಾನೆ ಮಾಡಲಾಗಿದ್ದು, ಆರೋಪಿ ಟಿಪ್ಪರ್ ಲಾರಿ ಚಾಲಕನನ್ನು ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

-masthmagaa.com

Contact Us for Advertisement

Leave a Reply