ಇರಾನ್‌ಗೆ ಭೇಟಿ ನೀಡಿದ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌!

masthmagaa.com:

ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಇರಾನ್‌ಗೆ ಭೇಟಿ ನೀಡಿ ಅಲ್ಲಿನ ಅಧ್ಯಕ್ಷ ಇಬ್ರಾಹಿಂ ರೈಸಿಯವರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಭಾರತ-ಇರಾನ್‌ ಸಂಬಂಧವನ್ನ ನೂತನ ಹಂತಕ್ಕೆ ತೆಗೆದುಕೊಂಡು ಹೋಗುವ ಅಗತ್ಯವಿದೆ. ಜಾಗತಿಕ ಭೌಗೋಳಿಕ ರಾಜಕೀಯ ಬದಲಾವಣೆಗಳ ದೃಷ್ಟಿಯಿಂದ SCO ಮತ್ತು BRICS ರೀತಿಯ ಗುಂಪುಗಳು ಅತ್ಯಂತ ಪರಿಣಾಮಕಾರಿಯಾಗಿವೆ ಅಂತ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಹೇಳಿದ್ದಾರೆ. ಬಳಿಕ ದೋವಲ್‌ ಅವ್ರು ಇರಾನ್‌ನ ಭದ್ರತಾ ಸಲಹೆಗಾರ ಅಲಿ ಶಂಖಾನಿ ಮತ್ತು ಇರಾನ್‌ ವಿದೇಶಾಂಗ ಸಚಿವ ಹುಸೇನ್‌ ಅಮೀರಬ್ದುಲ್ಲಾಹಿಯನ್‌ರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಚಬಹಾರ್‌ ಬಂದರು ಅಭಿವೃದ್ಧಿ, ಭಯೋತ್ಪಾದನೆ ನಿಗ್ರಹ ಹಾಗೂ ಅಫ್ಘಾನಿಸ್ತಾನದಲ್ಲಿನ ಪರಿಸ್ಥಿತಿ ಕುರಿತು ಚರ್ಚೆ ನಡೆಸಲಾಗಿದೆ ಅಂತ ಇರಾನ್‌ ವಿದೇಶಾಂಗ ಸಚಿವಾಲಯ ತಿಳಿಸಿದೆ.

-masthmagaa.com

Contact Us for Advertisement

Leave a Reply