masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 10,302 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು. 267 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 44 ಲಕ್ಷದ 99 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 4,65,349 ಆಗಿದೆ.

ಕಳೆದ 24 ಗಂಟೆಗಳಲ್ಲಿ11,787 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 3 ಕೋಟಿ 39 ಲಕ್ಷದ 09 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 1 ಲಕ್ಷದ 24 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 98.29 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.35 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 10.72 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 63.05 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 51.59 ಲಕ್ಷಕ್ಕೂ ಹೆಚ್ಚು ಡೋಸ್ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 115.79 ಕೋಟಿಗು ಅಧಿಕ ಡೋಸ್ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply