ದೇಶದಲ್ಲಿ ಮತ್ತೊಂದು ಕೊರೋನಾ ವೈರಸ್​ ಪ್ರಕರಣ ಪತ್ತೆ..!

masthmagaa.com:

ಜಾಗತಿಕವಾಗಿ 3,300ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದಿರೋ ಕೊರೋನಾ ಮಹಾಮಾರಿ ಭಾರತದಲ್ಲಿ ಇನ್ನಿಲ್ಲದ ಆತಂಕ ಸೃಷ್ಟಿಸಿದೆ. ವೈರಸ್ ಹರಡದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿವೆ. ಇದರ ನಡುವೆಯೇ ದೆಹಲಿಯಲ್ಲಿ ಮತ್ತೊಂದು ಪ್ರಕರಣ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 31ಕ್ಕೆ ಏರಿಕೆ ಕಂಡಿದೆ. ದೆಹಲಿಯ ಉತ್ತಮ್​ ನಗರ ನಿವಾಸಿಯಲ್ಲಿ ಕೊರೋನಾ ವೈರಸ್ (ಕೋವಿಡ್​​-19) ಪತ್ತೆಯಾಗಿದೆ ಅಂತ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಸೋಂಕು ತಗುಲಿದ ವ್ಯಕ್ತಿಯು ಇತ್ತೀಚೆಗಷ್ಟೇ ಥಾಯ್​ಲ್ಯಾಂಡ್​ ಹಾಗೂ ಮಲೇಷ್ಯಾಗೆ ಹೋಗಿ ಬಂದಿರುವ ಬಗ್ಗೆ ಮಾಹಿತಿ ಇದೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply