masthmagaa.com:

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 36,470 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. ಜುಲೈ 17ರ ಬಳಿಕ ದೃಢಪಟ್ಟ ಅತಿ ಕಡಿಮೆ ಪ್ರಕರಣ ಇದಾಗಿದೆ. ಜುಲೈ 17ರಂದು 35,065 ಕೊರೋನಾ ಪ್ರಕರಣಗಳು ದೃಢಪಟ್ಟಿತ್ತು. ಈಗ 36,470.. ಕಳೆದ ಕೆಲ ದಿನಗಳಿಂದ ದೇಶದಲ್ಲಿ ಕೊರೋನಾ ಹಾವಳಿ ಕಮ್ಮಿಯಾಗ್ತಿರೋದು ಒಳ್ಳೆಯ ವಿಚಾರ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 79.46 ಲಕ್ಷ ದಾಟಿದೆ. ಕಳೆದ 24 ಗಂಟೆಗಳಲ್ಲಿ 488 ಸೋಂಕಿತರು ಮೃತಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1.19 ಲಕ್ಷ ಆಗಿದೆ.

ಕಳೆದ 24 ಗಂಟೆಗಳಲ್ಲಿ 63,000+ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 72.01 ಲಕ್ಷ ದಾಟಿದೆ. ದೇಶದಲ್ಲಿ ಇನ್ನೂ ಕೂಡ 6.25 ಲಕ್ಷ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾರತದಲ್ಲಿ ಗುಣಮುಖ ಪ್ರಮಾಣ 90.62%ಗೆ ಏರಿಕೆಯಾಗಿದ್ದು, ಸಾವಿನ ಪ್ರಮಾಣ 1.50%ಗೆ ಇಳಿಕೆಯಾಗಿದೆ. ಅಕ್ಟೋಬರ್ 26ರಂದು ಒಟ್ಟು 9.58 ಲಕ್ಷ ಕೊರೋನಾ ಪರೀಕ್ಷೆಗಳನ್ನ ನಡೆಸಲಾಗಿದ್ದು, ದೇಶದಲ್ಲಿ ಒಟ್ಟು 10.44 ಕೋಟಿ ಕೊರೋನಾ ಪರೀಕ್ಷೆಗಳನ್ನು ನಡೆಸಿದಂತಾಗಿದೆ.

ಸಕ್ರಿಯ ಪ್ರಕರಣ ಹೆಚ್ಚಿರುವ 5 ರಾಜ್ಯಗಳು:

1. ಮಹಾರಾಷ್ಟ್ರ – 1.34 ಲಕ್ಷ

2. ಕೇರಳ – 93,000+

3. ಕರ್ನಾಟಕ – 75,000+

4. ಪಶ್ಚಿಮ ಬಂಗಾಳ – 37,000+

5. ತಮಿಳುನಾಡು – 29,000+

-masthmagaa.com

Contact Us for Advertisement

Leave a Reply