ನಾಳೆಯಿಂದ ಶುರುವಾಗಲಿದೆ ಪ್ರಧಾನಿ ಮೋದಿ ಅಮೆರಿಕ ಪ್ರವಾಸ!

masthmagaa.com:

ಪ್ರಧಾನಿ ಮೋದಿ ನಾಳೆ ಬೆಳಗ್ಗೆ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಅವರ ಜೊತೆಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್​, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​ ಕೂಡ ಜೊತೆಗೆ ಹೋಗ್ತಿದ್ದಾರೆ. ಈ ಪ್ರವಾಸದಲ್ಲಿ ಮೋದಿ ಅಮೆರಿಕ ಅಧ್ಯಕ್ಷ ಬೈಡೆನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಜೊತೆ ಮೀಟಿಂಗ್ ಮಾಡ್ತಾರೆ. ಕೊರೋನಾ ಕುರಿತ ಅಂತಾರಾಷ್ಟ್ರೀಯ ಶೃಂಗಸಭೆ, ಕ್ವಾಡ್ ಮೀಟಿಂಗ್​​ ಮತ್ತು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾಗಿಯಾಗಲಿದ್ದಾರೆ. ನಂತರ ಸೆಪ್ಟೆಂಬರ್ 26ರಂದು ವಾಪಸ್ ಭಾರತಕ್ಕೆ ಬರಲಿದ್ಧಾರೆ ಅಂತ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಮಾಹಿತಿ ನೀಡಿದ್ದಾರೆ.

-masthmagaa.com

Contact Us for Advertisement

Leave a Reply