ಮಧ್ಯಪ್ರದೇಶಧ ಭೋಪಾಲ್‌ನಲ್ಲಿ ನಡೆಯಲಿದೆ I.N.D.I.A ನಾಲ್ಕನೇ ಸಭೆ?

masthmagaa.com:

ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ ತನ್ನ ಮೂರನೆ ಸಭೆಯಲ್ಲಿ ಲೋಕಸಭೆ ಚುನಾವಣೆ ಸೀಟು ಹಂಚಿಕೆಗೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದೆ. ಇದೀಗ ಇಂಡಿಯಾದ ಮುಂದಿನ ಸಭೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆಯುವ ಸಾಧ್ಯತೆಯಿದೆ ಅಂತ ಹೇಳಲಾಗಿದೆ. ಲೋಕಸಭೆ ಚುನಾವಣೆಗೂ ಮುನ್ನ ಮಧ್ಯಪ್ರದೇಶ ರಾಜ್ಯ ವಿಧಾನಸಭಾ ಚುನಾವಣೆಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇದನ್ನ ಗಮನದಲ್ಲಿಟ್ಟುಕೊಂಡು ಸಭೆ ನಡೆಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

-masthmagaa.com

Contact Us for Advertisement

Leave a Reply