masthmagaa.com:

ಬೆಂಗಳೂರಿನಲ್ಲಿ ಭಾರಿ ಸದ್ದು ಮಾಡಿದ್ದ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕೈಗೆತ್ತಿಗೊಂಡಿದೆ. ಬೆಂಗಳೂರಿನಲ್ಲಿರುವ ಐಜಿ ಶ್ರೇಯಾಂಕದ ಅಧಿಕಾರಿ ನೇತೃತ್ವದಲ್ಲಿ ಎನ್​ಐಎ ತಂಡ ತನಿಖೆ ನಡೆಸುತ್ತಿದೆ.

ಅಂದ್ಹಾಗೆ ಆಕ್ಷೇಪಾರ್ಹ ಫೇಸ್​ಬುಕ್​ ಪೋಸ್ಟ್​ನಿಂದ ವಿರುದ್ಧ ಆಗಸ್ಟ್ 11ರಂದು ನಡೆದ ಗಲಭೆಯಲ್ಲಿ ಮೂವರು ಮೃತಪಟ್ಟಿದ್ದರು. 80 ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದರು. ಕೋಟ್ಯಂತರ ರೂಪಾಯಿ ಮೌಲ್ಯದ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿತ್ತು. ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಇಡಲಾಗಿತ್ತು. ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಪೊಲೀಸ್ ಠಾಣೆಗಳನ್ನು ಸುಟ್ಟು ಹಾಕಲಾಗಿತ್ತು. ಪ್ರಕರಣ ಸಂಬಂಧ ಇದುವರೆಗೆ ನೂರಾರು ಜನರನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರಲ್ಲಿ ಎಸ್​ಡಿಪಿಐ ಸಂಘಟನೆಯ ನಾಯಕರು ಮತ್ತು ಕಾರ್ಯಕರ್ತರೂ ಕೂಡ ಸೇರಿದ್ದಾರೆ.

ಇದೀಗ ಪ್ರಕರಣದ ತನಿಖೆಯನ್ನು ಎನ್​ಐಎ ವಹಿಸಿಕೊಂಡಿರೋದು ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಸಾಮಾನ್ಯವಾಗಿ ರಾಷ್ಟ್ರೀಯ ಭದ್ರತೆ ಮತ್ತು ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣಗಳನ್ನು ಎನ್​ಐಎ ತನಿಖೆ ನಡೆಸುತ್ತದೆ.

-masthmagaa.com

Contact Us for Advertisement

Leave a Reply