ಕೇಂದ್ರ ಸರ್ಕಾರಕ್ಕೆ ನಟ ನೀನಾಸಂ ಸತೀಶ್ ಟಾಂಗ್

ನೆರೆ ಪರಿಹಾರ ಬಿಡುಗಡೆಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ವಿರುದ್ಧ ನಟ ನೀನಾಸಂ ಸತೀಶ್ ಟಾಂಗ್ ಕೊಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾನು ನಿಮ್ಮ ಯಾವ ಪಕ್ಷದವನೂ ಅಲ್ಲ, ನನ್ನದು ಮನುಷ್ಯ ಪಕ್ಷ, ಬಡವರ ಪಕ್ಷ, ಹಸಿದವರ ಪಕ್ಷ. ಯಾವ ಸರ್ಕಾರವಾದರೂ ಕೇಳುವ ಹಕ್ಕು ನನಗಿದೆ. ನೆರೆ ಸಂತ್ರಸ್ತರ ವಿಚಾರದಲ್ಲಿ ನಿಮ್ಮ ಪಕ್ಷಗಳನ್ನು ಬದಿಗಿಟ್ಟು, ಅವರ ಕಷ್ಟಗಳಿಗೆ ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡುವ ಬುದ್ಧಿ ಬರಲಿ. ದಯಮಾಡಿ ನನ್ನನ್ನು ನಿಮ್ಮ ಯಾವ ಪಕ್ಷಕ್ಕೂ ಸೇರಿಸಬೇಡಿ ಪ್ಲೀಸ್ ಎಂದು ಮನವಿ ಮಾಡಿದ್ದಾರೆ. ಇದಕ್ಕೂ ಮುನ್ನ ಚಕ್ರವರ್ತಿ ಸೂಲಿಬೆಲೆ ಕೂಡ ಪರಿಹಾರದ ವಿಚಾರವಾಗಿ ಕೇಂದ್ರ ಸಚಿವ ಸದಾನಂದ ಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮಂತ್ರಿಗಿರಿ ಅನ್ನೋದು ಜನರು ಕೊಟ್ಟ ಭಿಕ್ಷೆ ಅನ್ನೋದನ್ನ ಮರೆಯಬೇಡಿ ಎಂದು ಸಲಹೆ ಕೊಟ್ಟಿದ್ದರು.

Contact Us for Advertisement

Leave a Reply