“ಹಂಟರ್” ಆಗಲಿರುವ ನಿರಂಜನ್ ಸುಧೀಂದ್ರ!

masthmagaa.com:

ಸೂಪರ್ ಸ್ಟಾರ್ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ “ಹಂಟರ್” ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ನಿರಂಜನ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಚಿತ್ರದ ಫಸ್ಟ್ ಲುಕ್ ಹಾಗೂ ಶೀರ್ಷಿಕೆಯನ್ನು ಸೂಪರ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಅನಾವರಣಗೊಳಿಸಿ ಶುಭ ಕೋರಿದ್ದಾರೆ.

ವಿನಯ್ ಕೃಷ್ಣ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಸೀಜರ್ ಚಿತ್ರವನ್ನು ನಿರ್ದೇಶಿಸಿದ್ದ, ವಿನಯ್ ಕೃಷ್ಣ ಅವರಿಗೆ ಇದು ಎರಡನೇ ಚಿತ್ರ.ಈ ಹಿಂದೆ ಪರಿ, ಸೀಜರ್ ಚಿತ್ರಗಳನ್ನು ನಿರ್ಮಿಸಿದ್ದ, ತ್ರಿವಿಕ್ರಮ ಸಾಫಲ್ಯ ತಮ್ಮ ತ್ರಿವಿಕ್ರಮ ಸಿನಿಮಾಸ್ ಲಾಂಛನದಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.

ಹೆಸರಾಂತ ಗಾಯಕ ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆಯುತ್ತಿದ್ದಾರೆ.ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ಅಂತ್ಯದ ವೇಳೆಗೆ ಶುರುವಾಗಲಿದೆ. ಕೇರಳದ ಸೌಮ್ಯ ಮೆನನ್ ನಿರಂಜನ್ ಅವರಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಮಾಹಿತಿ ಸದ್ಯದಲ್ಲೇ ಹೊರಬೀಳಲಿದೆ.

-masthmagaa.com

Contact Us for Advertisement

Leave a Reply