ಪರಿಹಾರ ಇಂದೇ ಬಿಡುಗಡೆ..! ರಾಜ್ಯಕ್ಕೆಷ್ಟು..? ಬಿಹಾರಕ್ಕೆಷ್ಟು..?

ರಾಜ್ಯಕ್ಕೆ ನೆರೆ ಪರಿಹಾರ ಇವತ್ತೇ ಬಿಡುಗಡೆಯಾಗಲಿದೆ ಅಂತ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶನಿವಾರ ಬೆಳಗ್ಗೆಯೇ ನೆರೆ ಪರಿಹಾರ ಹಣವನ್ನು ಬಿಡುಗಡೆ ಮಾಡುವುದಾಗಿ ಹಣಕಾಸು ಸಚಿವಾಲಯ ನನಗೆ ಭರವಸೆ ನೀಡಿದೆ ಎಂದು ತಿಳಿಸಿದ್ದಾರೆ.

ಪ್ರವಾಹ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ 1,813 ಕೋಟಿ ರೂಪಾಯಿ ಮಧ್ಯಂತರ ಪರಿಹಾರ ಬಿಡುಗಡೆಯಾಗಿದೆ. ಅದರಲ್ಲಿ ರಾಜ್ಯಕ್ಕೆ 1,200 ಕೋಟಿ ರೂಪಾಯಿ ಮತ್ತು ಬಿಹಾರಕ್ಕೆ 400 ಕೋಟಿ ರೂಪಾಯಿ ನೀಡಲಾಗಿದೆ. ಈ ಹಣವನ್ನು ಇಂದು ಬೆಳಗ್ಗೆಯೇ ಬಿಡುಗಡೆ ಮಾಡುವುದಾಗಿ ವಿತ್ತ ಸಚಿವರು ತಿಳಿಸಿದ್ದಾರೆ.

ರಾಜ್ಯದಲ್ಲಿ 38 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. ಆದ್ರೆ ಕೇಂದ್ರ ಸರ್ಕಾರ ಮಾತ್ರ ಕೇವಲ 1,200 ರೂಪಾಯಿ ಬಿಡುಗಡೆ ಮಾಡಿದೆ. ಈ ಪರಿಹಾರ ಯಾವುದಕ್ಕೂ ಸಾಲೋದಿಲ್ಲ ಎಂದು ವಿಪಕ್ಷಗಳು ಟೀಕಿಸಿವೆ.

Contact Us for Advertisement

Leave a Reply