masthmagaa.com:

ಸತತ 4ನೇ ಬಾರಿ ಮತ್ತು ಒಟ್ಟಾರೆಯಾಗಿ 7ನೇ ಬಾರಿ ಬಿಹಾರ ಸಿಎಂ ಆಗಿ ಇವತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರ ಜೊತೆಗೆ 14 ಸಚಿವರು ಕೂಡ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅದರಲ್ಲಿ ಬಿಜೆಪಿ ಇಬ್ಬರು ಉಪಮುಖ್ಯಮಂತ್ರಿಗಳು ಸೇರಿದ್ದಾರೆ. ತಾರ್​ಕಿಶೋರ್ ಪ್ರಸಾದ್ ಹಾಗೂ ರೇಣು ದೇವಿ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಆದ್ರೆ ಕಾರ್ಯಕ್ರಮವನ್ನು ಬಹಿಷ್ಕರಿಸಲು ತೇಜಸ್ವಿ ಯಾದವ್ ಅವರ ಆರ್​ಜೆಡಿ ಪಕ್ಷ ನಿರ್ಧರಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಆರ್​ಜೆಡಿ, ‘ಬಿಹಾರ ಜನಾದೇಶವು ಎನ್​ಡಿಎ ವಿರುದ್ಧವಾಗಿದೆ. ಹೀಗಾಗಿ ಪ್ರಮಾಣವಚನ ಕಾರ್ಯಕ್ರಮವನ್ನ ನಮ್ಮ ಪಕ್ಷ ಬಹಿಷ್ಕರಿಸುತ್ತೆ’ ಅಂತ ಹೇಳಿದೆ.

-masthmagaa.com

Contact Us for Advertisement

Leave a Reply