masthmagaa.com:

ಕಾಲೇಜುಗಳಲ್ಲಿ ಇನ್ಮುಂದೆ ಕೊರೋನಾ ಪರೀಕ್ಷೆ ನಡೆಸುವಂತಿಲ್ಲ ಅಂತ ರಾಜ್ಯ ಉನ್ನತ ಶಿಕ್ಷಣ ಇಲಾಖೆ ಎಲ್ಲಾ ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ. ಅಲ್ಲದೆ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವವರು ಹತ್ತಿರದ ಆರೋಗ್ಯ ಕೇಂದ್ರದಲ್ಲಿ ಟೆಸ್ಟ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ನವೆಂಬರ್​ 17ರಿಂದ ರಾಜ್ಯದಲ್ಲಿ ಸ್ನಾತಕೋತ್ತರ ಮತ್ತು ಅಂತಿಮ ವರ್ಷದ ಪದವಿ ಕಾಲೇಜುಗಳು ಆರಂಭವಾಗಿವೆ. ಕಾಲೇಜು ಆರಂಭವಾದ ಬಳಿಕ ನೂರಾರು ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕೆಲ ಕಾಲೇಜುಗಳಲ್ಲೇ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಕೊರೋನಾ ಪರೀಕ್ಷೆಗಳನ್ನ ಮಾಡಲಾಗ್ತಿತ್ತು. ಇದೀಗ ಅದಕ್ಕೆ ಬ್ರೇಕ್ ಹಾಕಲಾಗಿದೆ.

-masthmgaa.com

Contact Us for Advertisement

Leave a Reply