ಕೊರೋನಾ ವೈರಸ್ ಭೀತಿಗೆ ಐಪಿಎಲ್ ಮುಂದೂಡಿಕೆ ಇಲ್ಲ: ಸೌರವ್ ಗಂಗೂಲಿ

masthmagaa.com:

ದೆಹಲಿ: ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಭಾರತಕ್ಕೂ ಕಾಲಿಟ್ಟಿದೆ. ಈ ನಡುವೆ ಸದ್ಯದಲ್ಲೇ ಆರಂಭವಾಗಲಿರುವ ಐಪಿಎಲ್ ಪಂದ್ಯ ನಡೆಯುತ್ತಾ ಇಲ್ವಾ ಅನ್ನೋ ಪ್ರಶ್ನೆ ಎದ್ದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೊಪೆ, ಇಂಡಿಯನ್ ಪ್ರೀಮಿಯರ್ ಲೀಗ್ ಮುಂದೂಡುವ  ಬಗ್ಗೆ ಮಾತುಕತೆ ನಡೆಯುತ್ತಿದೆ ಅಂತ ಹೇಳಿದ್ದಾರೆ. 13ನೇ ಆವೃತ್ತಿಯ ಐಪಿಎಲ್​​​ನಲ್ಲಿ ಮುಂಬೈನಲ್ಲಿ 7 ಪಂದ್ಯಗಳು ನಡೆಯಲಿವೆ. ಅದರಂತೆ ಮಾರ್ಚ್​​ 29ರಂದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಕಳೆದ ವರ್ಷ ಫೈನಲ್​​ನಲ್ಲಿ ಸೋತಿದ್ದ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಮೊದಲ ಪಂದ್ಯ ನಡೆಯಲಿದೆ.

ಐಪಿಎಲ್ ಮುಂದೂಡಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಐಪಿಎಲ್ ಪಂದ್ಯಾವಳಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ವೇಳಾಪಟ್ಟಿಯಂತೆಯೇ ಪಂದ್ಯಗಳು ನಡೆಯಲಿವೆ. ಕೊರೋನಾ ವೈರಸ್ ಬಗ್ಗೆ ನಾವೇ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದಿದ್ದಾರೆ.

-masthmagaa.com

Contact Us for Advertisement

Leave a Reply