ರಾಜೀನಾಮೆ ಕೊಟ್ಟು ಹೋಗುವವರಿಗೆ ಬೇಡ ಅನ್ನೋಕೆ ಆಗಲ್ಲ: HDK

masthmagaa.com:

ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್​​ನಿಂದ ಮುಸ್ಲಿಂ ಮುಖಂಡರು ದೂರ ಸರಿಯುತ್ತಿರುವ ಬಗ್ಗೆ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ತೀಕ್ಷ್ಣವಾದ ತಿರುಗೇಟು ನೀಡಿದ್ದಾರೆ. ಮುಸ್ಲಿಂ ಸಮಾಜ ಒಂದನ್ನೇ ನಂಬಿಕೊಂಡು ಕೂತಿಲ್ಲ. ಅದೊಂದು ಸಮುದಾಯವನ್ನು ನೆಚ್ಚಿಕೊಂಡು ರಾಜಕೀಯ ಮಾಡುತ್ತಿಲ್ಲ. ಕರ್ನಾಟಕದ ಆರೂವರೆ ಕೋಟಿ ಜನತೆಯ ಪ್ರತಿನಿಧಿಯಾಗಿ ನಮ್ಮ ಪಕ್ಷವಿದೆ ಅಂತ ಹೇಳಿದ್ದಾರೆ. ಜೊತೆಗೆ ಯಾರು ಬೇಕಾದರೂ ರಾಜೀನಾಮೆ ಕೊಡಲಿ, ಅದನ್ನು ಇಟ್ಟುಕೊಳ್ಳುವವರು ಯಾರು? ಹೋಗುವವರು ಹೋಗಲಿ. ನಾನು ಯಾವುದೇ ಒಂದು ಸಮಾಜದ ಪ್ರತಿನಿಧಿಯಲ್ಲ. ನಮ್ಮ ಸಮಾಜ, ಒಕ್ಕಲಿಗ ಸಮಾಜ ನನಗೆ ಬೆಂಬಲ ಕೊಟ್ಟಿರಬಹುದು. ಹಾಗೆಂದು ನಾನು ಅದೊಂದು ಸಮಾಜದ ಪ್ರತಿನಿಧಿಯಲ್ಲ. ಕರ್ನಾಟಕದ ಆರೂವರೆ ಕೋಟಿ ಜನತೆಯ ಪ್ರತಿನಿಧಿ. ರಾಜ್ಯದ ಒಳಿತಿಗಾಗಿ ಕ್ರಮ ಕೈಗೊಳ್ಳುತ್ತೇನೆ ಅಂತ ಕುಮಾರಸ್ವಾಮಿ ಹೇಳಿದ್ದಾರೆ. ಇತ್ತ ಜೆಡಿಎಸ್‌-ಬಿಜೆಪಿ ಮೈತ್ರಿ ನಂತರ ಅಸಮಾಧಾನಗೊಂಡಿದ್ದ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರನ್ನು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿ ಮನವೊಲಿಸಿದ್ದಾರೆ. ಕಂದಕೂರ ಅವರನ್ನು ಭೇಟಿಯಾಗಿ ಮಾತನಾಡಿದ್ದೇನೆ. ಈಗಿನ ಸನ್ನಿವೇಶದಲ್ಲಿ ಮೈತ್ರಿಯ ಅಗತ್ಯತೆ ಕುರಿತು ಮನವರಿಕೆ ಮಾಡಲಾಗಿದೆ ಅಂತ ನಿಖಿಲ್‌ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply