ಕೊರೋನಾ ಭಯ ಬೇಡ…ಮೋದಿ ಇದ್ದಾರೆ: ಕೇಂದ್ರ ಆರೋಗ್ಯ ಸಚಿವ

ದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಪೀಡಿತರ ಸಂಖ್ಯೆ ಜಾಸ್ತಿಯಾಗುತ್ತಲೇ ಇದೆ. ಸದ್ಯ ದೇಶದಲ್ಲಿ ಈವರೆಗೆ 29 ಪ್ರಕರಣಗಳು ಪತ್ತೆಯಾಗಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಆರೋಗ್ಯ ಸಚಿವ ಹರ್ಷವರ್ದನ್, ದೇಶದ ಜನ ಕೊರೋನಾ ವೈರಸ್​​​ಗೆ ಹೆದರಬೇಕಾದ ಅವಶ್ಯಕತೆ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಖುದ್ದು ಪರಿಸ್ಥಿತಿಯನ್ನು ನೋಡಿಕೊಳ್ಳುತ್ತಿದ್ದಾರೆ ಅಂತ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಕೊರೋನಾ ವೈರಸ್ ಬಗ್ಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಪರಿಸ್ಥಿತಿ ಬಗ್ಗೆ ನಿರಂತರವಾಗಿ ಮಾಹಿತಿ ಪಡೆಯುತ್ತಿದ್ದಾರೆ. ನಾನು ಕೂಡ ಕೊರೋನಾ ವೈರಸ್ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇನೆ. ಅದಕ್ಕಾಗಿಯೇ ಈಗಾಗಲೇ ಸಚಿವರ ತಂಡವನ್ನು ಕೂಡ ರಚಿಸಲಾಗಿದೆ ಅಂತ ಮಾಹಿತಿ ನೀಡಿದ್ದಾರೆ. ಒಟ್ಟಾರೆ 29 ಪ್ರಕರಣಗಳು ಪತ್ತೆಯಾಗಿದ್ದು, ಅವರಲ್ಲಿ ಕೇರಳ ಮೂಲದ ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಅಂದ್ರು.

ಜೊತೆಗೆ ವಿಮಾನ ನಿಲ್ದಾಣದಲ್ಲಿ ಮೊದಲಿಗೆ 12 ದೇಶಗಳಿಂದ ಬರುವ ಪ್ರಯಾಣಿಕರನ್ನು ಮಾತ್ರವೇ ಪರಿಶೀಲನೆಗೆ ಒಳಪಡಿಸಲಾಗುತ್ತಿತ್ತು. ಆದ್ರೆ ಈಗ ಎಲ್ಲಾ ದೇಶಗಳಿಂದ  ಬರುವ ಪ್ರಯಾಣಿಕರನ್ನು ಸ್ಕ್ರೀನಿಂಗ್​​​ಗೆ ಒಳಪಡಿಸಲಾಗುತ್ತಿದೆ ಅಂತ ತಿಳಿಸಿದ್ರು.

 

Contact Us for Advertisement

Leave a Reply