ಕೊರೋನಾ ವೈರಸ್​​​ಗೆ ಹೆದರೋ ಅಗತ್ಯ ಇಲ್ಲ: ಪ್ರಧಾನಿ ಮೋದಿ ಅಭಯ

ಭಾರತದಲ್ಲೂ ಒಂದೊಂದೇ ಕೊರೋನಾ ವೈರಸ್ ಕೇಸ್​​ಗಳು ಪತ್ತೆಯಾಗುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಆದ್ರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಯಾರೂ ಹೆದರಬೇಕಾದ ಅಗತ್ಯವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೋನಾ ವೈರಸ್ ನಿಯಂತ್ರಿಸಲು ಒಟ್ಟಾಗಿ ಕೆಲಸ ಮಾಡುತ್ತಿವೆ ಅಂತ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರೋ ಪ್ರಧಾನಿ ಮೋದಿ, ಗ್ರಾಫಿಕ್ಸ್ ಪ್ಲೇಟ್​ ಒಂದನ್ನು ಶೇರ್ ಮಾಡಿದ್ದಾರೆ. ಈ ಮೂಲಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗದಂತೆ ತಮ್ಮನ್ನು ತಾವು ಕಾಪಾಡಿಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಸರ್ಕಾರ ಕೂಡ ಅಲರ್ಟ್​ ಆಗಿದ್ದು, ಭಾರತಕ್ಕೆ ಆಗಮಿಸುತ್ತಿರುವ ಜನರನ್ನು ಪರೀಕ್ಷಿಸೋದ್ರಿಂದ ಹಿಡಿದು ತ್ವರಿತ ವೈದ್ಯಕೀಯ ಚಿಕಿತ್ಸೆ ನೀಡುವವರೆಗೆ ಎಲ್ಲದರಲ್ಲೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಒಟ್ಟಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದಿದ್ದಾರೆ.

ಅಲ್ಲದೆ ಈ ಬಗ್ಗೆ ಸಭೆ ನಡೆಸಿರುವ ಪ್ರಧಾನಿ ಮೋದಿ, ದೇಶದಲ್ಲಿ ಕೊರೋನಾವೈರಸ್​​​ ಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಇದಕ್ಕೂ ಮುನ್ನ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಪ್ರಧಾನಿ ಮೋದಿ ಭೇಟಿಯಾಗಿದ್ದು, ಕೊರೋನಾ ವೈರಸ್ ಹರಡುತ್ತಿರುವ ಬಗ್ಗೆ ಚರ್ಚೆ ನಡೆಸಿದ್ದಾರೆ.

Contact Us for Advertisement

Leave a Reply