ಕಾಶ್ಮೀರದ ವಿಚಾರದಲ್ಲಿ ಸೋಲೊಪ್ಪಿಕೊಂಡ ಪಾಕಿಸ್ತಾನ..!

ನ್ಯೂಯಾರ್ಕ್‍: ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನ ಕೊನೆಗೂ ಸೋಲೊಪ್ಪಿಕೊಂಡಿದೆ. ಭಾರತದ ಮೇಲೆ ಅಂತರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೇರಲು ವಿಫಲವಾಗಿದ್ದೇವೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಒಪ್ಪಿಕೊಂಡಿದ್ದಾರೆ. ನ್ಯೂಯಾರ್ಕ್‍ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಇಮ್ರಾನ್ ಖಾನ್, ಕಾಶ್ಮೀರದ ವಿಚಾರದಲ್ಲಿ ಅಂತರಾಷ್ಟ್ರೀಯ ಸಮುದಾಯಗಳ ವರ್ತನೆ ಸರಿಯಲ್ಲ. ಈ ಸಂಬಂಧ ಯಾರೂ ಕೂಡ ಮೋದಿ ಮೇಲೆ ಯಾವುದೇ ಒತ್ತಡ ಹೇರುತ್ತಿಲ್ಲ. ಆದ್ರೆ ನಾವು ಕಾಶ್ಮೀರದ ವಿಚಾರವಾಗಿ ಭಾರತದ ಮೇಲೆ ಒತ್ತಡ ಹೇರೋದನ್ನು ಬಿಡೋದಿಲ್ಲ ಎಂದು ಹೇಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ವಯ ನೀಡಲಾಗಿದ್ದ ವಿಶೇಷ ಸವಲತ್ತುಗಳನ್ನು ವಾಪಸ್ ಪಡೆದಿದ್ದನ್ನು ಪಾಕ್‍ಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಭಾರತದ ಜೊತೆ ನಿರಂತರವಾಗಿ ಕಿರಿಕ್ ಮಾಡುತ್ತಲೇ ಇದೆ. ಅಲ್ಲದೆ ವಿಶ್ವಮಟ್ಟದಲ್ಲಿ ಕಾಶ್ಮೀರದ ವಿಚಾರವಾಗಿ ಗಮನ ಸೆಳೆದು ಭಾರತದ ಮೇಲೆ ಒತ್ತಡ ಹೇರಲು ಯತ್ನಿಸಿ ಮುಖಭಂಗ ಅನುಭವಿಸಿದೆ.

Contact Us for Advertisement

Leave a Reply