ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ಪ್ರಸ್ತಾಪವನ್ನ ತಿರಸ್ಕರಿಸಿದ ಸಿಎಂ!

masthmagaa.com:

ರಾಜ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗಾಗಿ ಪ್ರತ್ಯೇಕ ಕಾಲೇಜುಗಳನ್ನ ಸ್ಥಾಪಿಸೋದಕ್ಕೆ ವಕ್ಫ್‌ ಮಂಡಳಿ ಮುಂದಾಗಿತ್ತು. ಆದ್ರೆ ಈ ಪ್ರಸ್ತಾವನೆಯನ್ನ ಸಿಎಂ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ. ʻವಕ್ಫ್‌ ಮಂಡಳಿ ಮಹಿಳಾ ಕಾಲೇಜು ಆರಂಭಿಸೊ ಕುರಿತು ಯಾವುದೇ ಪ್ರಸ್ತಾಪ ಸಲ್ಲಿಸಿಲ್ಲ. ನನ್ನೊಂದಿಗಾಗಲೀ, ನಮ್ಮ ಸರ್ಕಾರದ ಯಾವುದೇ ಹಂತದಲ್ಲಾಗಲೀ ಈ ಬಗ್ಗೆ ಚರ್ಚೆಯಾಗಿಲ್ಲʼ ಅಂತ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಜೊತೆಗೆ ವಕ್ಫ್​ ಮಂಡಳಿ ಅಧ್ಯಕ್ಷರು ಏನು ಹೇಳಿದ್ದಾರೆ ಅಂತ ನಂಗೆ ಗೊತ್ತಿಲ್ಲ. ಅದು ಅವರ ವೈಯಕ್ತಿಕ ನಿಲುವು ಇರಬಹುದು. ನಮ್ಮ ಸರ್ಕಾರದ ನಿಲುವು ಅಲ್ಲ. ವಕ್ಫ್ ಮಂಡಳಿ ಅಧ್ಯಕ್ಷರು ತಮ್ಮ ಆಲೋಚನೆಗಳ ಬಗ್ಗೆ ನನ್ನೊಂದಿಗೆ ಮಾತನಾಡಲಿʼ ಅಂತೇಳಿ ಸಿಎಂ ವಿವಾದದಿಂದ ಅಂತರ ಕಾಯ್ದುಕೊಂಡಿದ್ದಾರೆ. ಇತ್ತ ‘ಸರ್ಕಾರದ ಅನುದಾನದಿಂದ ಕಾಲೇಜು ಆರಂಭಿಸಲಾಗುವುದು. ಇದರಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗೆ ಮಾತ್ರವೇ ಅವಕಾಶ ಇರುತ್ತದೆ ಅಂತ ಎಲ್ಲಿಯೂ ಹೇಳಿಲ್ಲ. ನನ್ನ ಪೂರ್ಣ ಹೇಳಿಕೆಯನ್ನ ಮಾಧ್ಯಮಗಳು ಪ್ರಸಾರ ಮಾಡಿಲ್ಲ. ಕೇವಲ ಮುಸ್ಲಿಂ ಮಹಿಳೆಯರಿಗೆ ಮಾತ್ರವೇ ಕಾಲೇಜು ಆರಂಭಿಸುತ್ತೇವೆ ಅಂತ ನನ್ನ ಹೇಳಿಕೆಯನ್ನ ಮಾಧ್ಯಮಗಳು ತಿರುಚುತ್ತಿವೆ ಅಂತ ವಕ್ಫ್‌ ಮಂಡಳಿಯ ಅಧ್ಯಕ್ಷರು ಕೂಡ ಈ ಬಗ್ಗೆ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply