ಅಂಗನವಾಡಿ ಕೇಂದ್ರಗಳಿಗೆ ಕಳಪೆ ಮೊಟ್ಟೆ ಪೂರೈಕೆ! ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?

masthmagaa.com:

ಮಕ್ಕಳು, ಗರ್ಭಿಣಿಯರಲ್ಲಿ ಅಪೌಷ್ಟಿಕತೆ ನಿವಾರಿಸಲು ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುವ ಮೊಟ್ಟೆಗಳನ್ನ ಬೇಯಿಸಿದಾಗ, ಕೆಟ್ಟಿರುತ್ತದೆ. ಒಳಭಾಗ ಕಪ್ಪುಗಿರುತ್ತದೆ. ಕೆಟ್ಟವಾಸನೆಯೂ ಬರುತ್ತೆ ಅಂತ ಹಾವೇರಿಯ ಅಂಗನವಾಡಿ ಕಾರ್ಯಕರ್ತೆಯರು ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹಾವೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಗುಣಮಟ್ಟದ ಮೊಟ್ಟೆ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ CDPOಗಳಿಗೆ ನಿರ್ದೇಶಿಸಲಾಗಿದೆ. ಕಳಪೆ ಮೊಟ್ಟೆ ಪೂರೈಕೆ ಕಂಡು ಬಂದರೆ ಕ್ರಮ ಕೈಗೊಳ್ಳುತ್ತೇವೆ ಅಂತ ಹೇಳಿದ್ದಾರೆ. ಇತ್ತ ರಾಜ್ಯದ ಕೆಲವು ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆ ಮಾಡಿದವರನ್ನ ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಅಂತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದ್ದಾರೆ.

-masthmagaa.com

Contact Us for Advertisement

Leave a Reply