ರಾಜ್ಯದಲ್ಲಿ ಎಲ್ಲೆಲ್ಲಿ ಮಳೆಯಾಯ್ತು? ಹವಾಮಾನ ವರದಿ ಹೇಗಿದೆ?

masthmagaa.com:

ರಾಜ್ಯದ ಕೆಲವೊಂದುಕಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ತಡಗಣಿಯಲ್ಲಿ ಅತಿಹೆಚ್ಚು 119 ಮಿಲಿ ಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲವೊಂದುಕಡೆ ಭಾರಿ ಮಳೆ, ಬಹುತೇಕ ಕಡೆ ಸಾಧರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಬೆಂಗಳೂರಿನ ಬಹುತೇಕ ಕಡೆ ಸಾಧಾರಣ ಮಳೆಯಾಗೋ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

-masthmagaa.com

Contact Us for Advertisement

Leave a Reply