ಬೈಕ್‍ನಲ್ಲಿ ಬಂದು ಸರಗಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ದೆಹಲಿಯಲ್ಲಿ ಸರಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ಇಲ್ಲಿನ ಹರಿನಗರದಲ್ಲಿ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಸರವನ್ನು ಬೈಕ್‍ನಲ್ಲಿ ಬಂದ ದುಷ್ಟರು ಎಗರಿಸಿದ್ದಾರೆ. ಮಹಿಳೆಯೊಬ್ಬರು ರಸ್ತೆ ಪಕ್ಕದಲ್ಲಿ ನಿಂತು ಪೊರಕೆ ಖರೀದಿಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ದುಷ್ಕರ್ಮಿಗಳು ಇನ್ನೇನು ಮಹಿಳೆ ವಾಪಸ್ ಹೋಗಬೇಕು ಎನ್ನುವಷ್ಟರಲ್ಲಿ ಕುತ್ತಿಗೆಯಲ್ಲಿದ್ದ ಸರ ಕದ್ದು ಎಸ್ಕೇಪ್ ಆಗಿದ್ದಾರೆ. ಬೈಕ್‍ನಲ್ಲಿದ್ದ ಇಬ್ಬರು ಹೆಲ್ಮೆಟ್ ಧರಿಸಿದ್ದು, ಈ ಎಲ್ಲಾ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

 

Contact Us for Advertisement

Leave a Reply