ಯಾರಾಗ್ತಾರೆ ಕಾಂಗ್ರೆಸ್ ಅಧ್ಯಕ್ಷ..? 2 ದಿನ ಕಾದು ನೋಡಿ…

ಸರ್ಕಾರ ರಚನೆಯಾಗಿ 2 ತಿಂಗಳು ಕಳೆದಿದ್ದು, ಈಗ ವಿಪಕ್ಷ ನಾಯಕನ ಆಯ್ಕೆಗೆ ಕಾಂಗ್ರೆಸ್ ಮುಂದಾಗಿದೆ. ಇನ್ನೆರಡು ದಿನಗಳಲ್ಲಿ ವಿಪಕ್ಷ ನಾಯಕ ಯಾರು ಅನ್ನೋ ಕುತೂಹಲಕ್ಕೆ ತೆರೆ ಬೀಳಲಿದೆ. ಈ ಸಂಬಂಧ ನಿನ್ನೆ ಬೆಂಗಳೂರಿನಲ್ಲಿ ಸಭೆ ನಡೆಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಮಧುಸೂದನ್ ಮಿಸ್ತ್ರಿ ಒಟ್ಟು 63 ನಾಯಕರಿಗೆ ಆಹ್ವಾನ ಕೊಟ್ಟಿದ್ರು. ಆದ್ರೆ ಅವರಲ್ಲಿ 10 ಮಂದಿ ಗೈರಾಗಿ, 53 ಜನ ಭಾಗಿಯಾಗಿದ್ದರು. ಸದ್ಯ 53 ನಾಯಕರ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿ, ಅಭಿಪ್ರಾಯ ಸಂಗ್ರಹಿಸಿರುವ ಮಧುಸೂದನ್ ಮಿಸ್ತ್ರಿ, ಇಂದು ಹೈಕಮಾಂಡ್‍ಗೆ ಸಲ್ಲಿಸಲಿದ್ದಾರೆ. ಇದರ ಆಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ನಾಡಿದ್ದು ಸಿಎಲ್‍ಪಿ ಸಭೆ ಕರೆಯಲಾಗಿದ್ದು, ಅದರಲ್ಲಿ ವಿಪಕ್ಷ ನಾಯಕ ಯಾರಾಗ್ತಾರೆ ಅನ್ನೋದನ್ನ ಘೋಷಿಸುವ ಸಾಧ್ಯತೆ ಇದೆ.

Contact Us for Advertisement

Leave a Reply