masthmagaa.com:
2024ರ ಆಸ್ಕರ್ ಪ್ರಶಸ್ತಿಗಾಗಿ ಭಾರತದಿಂದ ಸ್ಪರ್ಧಿಸಲು ಮಲಯಾಳಂನ `2018- Everyone is a hero’ ಸಿನಿಮಾ ಅಧಿಕೃತವಾಗಿ ಪ್ರವೇಶ ಪಡಿದಿದೆ. ಈ ವಿಷಯನ್ನು ಇಂದು ಚೆನ್ನೈನಲ್ಲಿ ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾ ಪ್ರಕಟಿಸಿದ್ದು, 16 ಜನ ಜ್ಯೂರಿಗಳಿರುವ ತಂಡ 2018 ಸಿನಿಮಾವನ್ನು ಅವಿರೋಧವಾಗಿ ಆಯ್ಕೆ ಮಾಡಿದೆ ಅಂತ ಆಯ್ಕೆ ಸಮಿತಿ ಅಧ್ಯಕ್ಷ ಗಿರೀಶ್ ಕಾಸರವಳ್ಳಿ ತಿಳಿಸಿದ್ದಾರೆ. 2024ರ ಆಸ್ಕರ್ ಪ್ರಶಸ್ತಿಯ ‘ಅತ್ಯುತ್ತಮ ಅಂತರರಾಷ್ಟ್ರೀಯ ವೈಶಿಷ್ಟ್ಯದ ಚಿತ್ರ’ ವಿಭಾಗಕ್ಕೆ 2018 ಸಿನಿಮಾವನ್ನು ಕಳುಹಿಸಿಕೊಡಲಾಗಿದೆ ಅಂತ ಹೇಳಿದ್ದಾರೆ.
-masthmagaa.com
Contact Us for Advertisement