ಪಾಕಿಸ್ತಾನದಲ್ಲಿರುವ ಧಾರ್ಮಿಕ ಅಲ್ಪಸಂಖ್ಯಾತರಿಗೆ ಪಾಕಿಸ್ತಾನ ರಕ್ಷಣೆ ಕೊಡ್ಬೇಕು!

masthmagaa.com:

ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿ ಹಿಂದೂ ಮಹಿಳೆಯೊಬ್ಬರನ್ನ ಭೀಕರವಾಗಿ ಹತ್ಯೆ ಮಾಡಿದ ಘಟನೆ ವರದಿಯಾಗಿತ್ತು. ಈ ಘಟನೆಗೆ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂಧಮ್‌ ಬಗ್ಚಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ವರದಿಯನ್ನ ನೋಡಿದ್ದೇವೆ ಆದ್ರೆ ಕೇಸ್‌ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಪಾಕಿಸ್ತಾನ ತನ್ನ ದೇಶದಲ್ಲಿರೋ ಧಾರ್ಮಿಕ ಅಲ್ಪಸಂಖ್ಯಾತರಿಗೆ ಸುರಕ್ಷತೆಯನ್ನ ನೀಡೋದು ಅಲ್ಲಿನ ಸರ್ಕಾರದ ಕರ್ತವ್ಯ ಅದನ್ನ ಪಾಕಿಸ್ತಾನ ಮಾಡ್ಬೇಕು ಅಂತ ಹೇಳಿದ್ದಾರೆ. ಇನ್ನು ಈ ಘಟನೆಯ ನಂತರ ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿ ಜನರು ಆಕ್ರೋಶಗೊಂಡಿದ್ದು, ಹಿಂಸಾಚಾರ ಭುಗಿಲೆದ್ದಿದೆ ಅಂತ ವರದಿಯಾಗಿದೆ.

-masthmagaa.com

Contact Us for Advertisement

Leave a Reply