ಪಾಕ್​ನಲ್ಲಿ ಸ್ಫೋಟ: ನಾಲ್ವರು ಪಾಕ್ ಸೈನಿಕರು ಸಾವು

masthmagaa.com:

ಪಾಕಿಸ್ತಾನದ ಖ್ವೆಟ್ಟಾದಲ್ಲಿ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ನಾಲ್ವರು ಪ್ಯಾರಾಮಿಲಿಟರಿ ಸೈನಿಕರು ಪ್ರಾಣ ಕಳ್ಕೊಂಡಿದ್ದಾರೆ. ಬೈಕಿನಲ್ಲಿ ಬಂದ ಉಗ್ರ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ದಾಳಿಯ ಹೊಣೆಯನ್ನು ಟಿಟಿಪಿ ಉಗ್ರ ಸಂಘಟನೆ ಹೊತ್ತುಕೊಂಡಿದೆ. ದಾಳಿಯನ್ನು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಖಂಡಿಸಿದ್ದಾರೆ. ಇನ್ನೊಂದು ವಿಚಾರ ಅಂದ್ರೆ ಅಫ್ಘಾನಿಸ್ತಾನದ ಗಡಿಗೆ ಹತ್ತಿರದ ಪ್ರದೇಶದಲ್ಲೇ ಈ ಘಟನೆ ನಡೆದಿದೆ. ಅತ್ತ ಇರಾಕ್​​ನಲ್ಲಿ ಐಎಸ್​​ ಉಗ್ರರು ನಡೆಸಿದ ದಾಳಿಯಲ್ಲಿ 13 ಮಂದಿ ಪೊಲೀಸರು ಪ್ರಾಣ ಬಿಟ್ಟಿದ್ದಾರೆ. ಉತ್ತರ ಇರಾಕ್​​ನ ಕಿರ್ಕುಕ್​ ಪ್ರದೇಶದಲ್ಲಿ ಈ ಘಟನೆ ವರದಿಯಾಗಿದೆ.

-masthmagaa.com

Contact Us for Advertisement

Leave a Reply