ಡಿಕೆಶಿ ಆಯ್ತು..ಈಗ ಪರಂಗೆ ಐಟಿ ಈಟಿ..!

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಳಿಕ ಮಾಜಿ ಡಿಸಿಎಂ ಪರಮೇಶ್ವರ್‍ಗೂ ಐಟಿ ಸಂಕಷ್ಟ ಎದುರಾದಂತಿದೆ. ಇವತ್ತು ಪರಮೇಶ್ವರ್ ಗೆ ಸೇರಿದ ಶಿಕ್ಷಣ ಸಂಸ್ಥೆ, ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರಿನ ಸಿದ್ಧಾರ್ಥ ನಗರದಲ್ಲಿರುವ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ತುಮಕೂರು, ನೆಲಮಂಗಲದ ವಿವಿಧ ಶಿಕ್ಷಣ ಸಂಸ್ಥೆ, ಬೆಂಗಳೂರಿನ ಸದಾಶಿವನಗರದ ಮನೆ ಹೀಗೆ ಒಟ್ಟು 3 ಕಡೆಗಳಲ್ಲಿ ದಾಳಿ ನಡೆಸಿ, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನು ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಪರಮೇಶ್ವರ್, ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದಿರುವ ಮಾಹಿತಿ ಇದೆ. ಅದ್ಕೆ ನಮ್ಮ ಕಡೆಯಿಂದ ಯಾವುದೇ ಆಕ್ಷೇಪವಿಲ್ಲ. ಕಾನೂನಿಗೆ ವಿರುದ್ಧವಾಗಿ ಏನಾದರೂ ನಡೆದಿದ್ದರೆ ಕ್ರಮ ತೆಗೆದುಕೊಳ್ಳಲಿ ಎಂದಿದ್ದಾರೆ.

 

Contact Us for Advertisement

Leave a Reply