ಐಟಿ ದಾಳಿಗೆ ಹೊಸ ಟ್ವಿಸ್ಟ್..! ಪರಮೇಶ್ವರ್ ಪಿಎ ಆತ್ಮಹತ್ಯೆ..

ಮಾಜಿ ಡಿಸಿಎಂ ಪರಮೇಶ್ವರ್ ಸಾಮ್ರಾಜ್ಯದ ಮೇಲೆ ಐಟಿ ದಾಳಿಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆತ್ಮಹತ್ಯೆಗೂ ಮುನ್ನ ತನ್ನ ಆಪ್ತರಿಗೆ ಕರೆ ಮಾಡಿ ಮಾತನಾಡಿದ್ದ ಅವರು, ನಾನು ನಿಯತ್ತಿನಿಂದ ಬದುಕಿದ್ದು, ಈಗಷ್ಟೇ ಮನೆ ಕಟ್ಟಿಸುತ್ತಿದ್ದೇನೆ. ನನ್ನ ಮನೆಯ ಮೇಲೆ ಐಟಿ ದಾಳಿ ನಡೆಸಿದ್ದಾರೆ. ಈ ರೀತಿ ದಾಳಿ ನಡೆಸಿ ಅನ್ಯಾಯ ಮಾಡುತ್ತಿದ್ದಾರೆ. ಐಟಿ ಅಧಿಕಾರಿಗಳು ಸಿಕ್ಕಾಪಟ್ಟೆ ಪ್ರಶ್ನೆಗಳನ್ನು ಕೇಳುತ್ತಾರೆ ಅದನ್ನು ಎದುರಿಸಲು ನನಗೆ ಸಾಧ್ಯವಿಲ್ಲ ಎಂದು ಹೇಳಿದ್ದರು. ಅಲ್ಲದೆ ನಾನು ಬೆಂಗಳೂರು ವಿವಿ ಕ್ಯಾಂಪಸ್‍ನಲ್ಲಿ ಇದ್ದೇನೆ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿ ಫೋನ್ ಕಟ್ ಮಾಡಿದ್ದರು. ನಂತರ ಅವರ ಆಪ್ತರು ಕರೆ ಮಾಡಿದ್ರೆ ಮೊಬೈಲ್ ಸ್ವಿಚ್ ಆಫ್ ಬರುತ್ತಿತ್ತು. ಆದ್ರೆ ಈಗ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.

ಆದ್ರೆ ಈ ಸಂಭಾಷಣೆ ವಿಚಾರ ಎಷ್ಟರಮಟ್ಟಿಗೆ ಸತ್ಯ..? ಇದು ನಿಜವಾಗಿಯೂ ಆತ್ಮಹತ್ಯೆನಾ..? ಅನ್ನೋದು ಪೊಲೀಸರ ತನಿಖೆಯ ನಂತರವಷ್ಟೇ ಬೆಳಕಿಗೆ ಬರಲಿದೆ ಅಂದ್ರು.

Contact Us for Advertisement

Leave a Reply