ಮಣಿಪುರ ಬೆಂಕಿ: ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ

masthmagaa.com:

ಇತ್ತ ಸಂಸತ್ತಿನಲ್ಲೂ ಮಣಿಪುರ ವಿಚಾರ ಸಾಕಷ್ಟು ಗದ್ದಲ ಮಾಡ್ತಿದೆ. ಮುಂಗಾರು ಅಧಿವೇಶನದ ಎರಡನೇ ದಿನ ಲೋಕಸಭೆಯಲ್ಲಿ ಕಲಾಪ ಶುರು ಆಗುತ್ತಿದ್ದಂತೇ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಗದ್ದಲ ಎಬ್ಬಿಸಿವೆ. ಕಾಂಗ್ರೆಸ್, ಡಿಎಂಕೆ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಘೋಷಣೆ ಕೂಗೋದ್ರಿಂದ ಸಮಸ್ಯೆಗೆ ಯಾವುದೇ ಪರಿಹಾರ ಸಿಗಲ್ಲ. ಹೀಗಾಗಿ ಮಾತುಕತೆ ಮತ್ತು ಚರ್ಚೆ ಮೂಲಕ ಬಗೆಹರಿಸಿಕೊಳ್ಳಬೇಕು ಅಂತ ಪ್ರತಿಭಟನಾನಿರತ ಸದಸ್ಯರಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವ್ರು ಹೇಳಿದ್ದಾರೆ. ಆದ್ರೆ ಇದ್ಯಾವುದಕ್ಕೂ ಕಿವಿಗೊಡದೆ ಸಂಸದರು ತಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ. ಈ ಹಿನ್ನಲೆಯಲ್ಲಿ ಲೋಕಸಭೆ ಅಧಿವೇಶನವನ್ನ ಸ್ಪೀಕರ್‌ ಜುಲೈ 23ಕ್ಕೆ ಅಂದ್ರೆ ಸೋಮವಾರಕ್ಕೆ ಮುಂದೂಡಿದ್ದಾರೆ.

-masthmagaa.com

Contact Us for Advertisement

Leave a Reply