ಅಪ್ಪು- ಪವನ್ ಕುಮಾರ್ ಕಾಂಬಿನೇಷನ್ ಸಿನಿಮಾ ‘ದ್ವಿತ್ವ’ ಗೆ ಸೆಪ್ಟಂಬರ್ ನಿಂದ ಶೂಟಿಂಗ್ ಆರಂಭ!!

masthmagaa.com:

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಪವನ್​ ಕುಮಾರ್​ ಜೊತೆಯಾಗಿ ಮಾಡಲಿರುವ ಹೊಸ ಚಿತ್ರಕ್ಕೆ ‘ದ್ವಿತ್ವ’ ಎಂದು ಶೀರ್ಷಿಕೆ ಇಡಲಾಗಿದೆ. ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಸ್ಮ್​ ಬ್ಯಾನರ್​ನಲ್ಲಿ ಈ ಸಿನಿಮಾ ಮೂಡಿಬರಲಿದ್ದು, ಗುರುವಾರ (ಜು.1) ಬೆಳಗ್ಗೆ ಟೈಟಲ್​ ಅನೌನ್ಸ್​ ಮಾಡಲಾಗಿದೆ. ಈ ಸುದ್ದಿ ಕೇಳಿ ಅಪ್ಪು ಫ್ಯಾನ್ಸ್​ ಥ್ರಿಲ್​ ಆಗಿದ್ದಾರೆ.

‘ಕೆಜಿಎಫ್: ಚಾಪ್ಟರ್​ 2​’, ‘ಸಲಾರ್’ ಮುಂತಾದ ದೈತ್ಯ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲ್ಸ್ಮ್​ ಸಂಸ್ಥೆಯಿಂದ ತಯಾರಾಗಲಿರುವ 9ನೇ ಸಿನಿಮಾ ಇದಾಗಿದೆ. ಸೈಕಲಾಜಿಕಲ್​ ಕಥಾಹಂದರ ಹೊಂದಿದ್ದ ‘ಲೂಸಿಯಾ’ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ಪವನ್​ ಕುಮಾರ್​ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು. ಈಗ ಅವರು ‘ದ್ವಿತ್ವ’ ಸಿನಿಮಾದಲ್ಲಿ ಮತ್ತೆ ಸೈಕಲಾಜಿಕಲ್​ ಕಥೆಯನ್ನೇ ಆಯ್ಕೆ ಮಾಡಿಕೊಂಡಿರುವುದು ವಿಶೇಷ. ಶೀರ್ಷಿಕೆ ಜೊತೆಗೆ ಡಿಫರೆಂಟ್​ ಆದಂತಹ ಪೋಸ್ಟರ್​ ಕೂಡ ಬಿಡುಗಡೆ ಮಾಡಲಾಗಿದೆ.

masthmagaa.com

Contact Us for Advertisement

Leave a Reply