ಪೆಟ್ರೋಲ್‌ ಡೀಸೆಲ್‌ಗೂ ಜಿಎಸ್‌ಟಿ! ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದೇನು?

masthmagaa.com:

ರಾಜ್ಯಗಳು ಒಪ್ಪಿದ್ರೆ ಪೆಟ್ರೋಲಿಯಂ ಉತ್ಪನ್ನಗಳನ್ನ ಕೂಡ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರ್ಬೋದು ಅಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳಾದ ಪೆಟ್ರೋಲ್, ಡೀಸೆಲ್, ನೈಸರ್ಗಿಕ ಅನಿಲ, ವಿಮಾನ ಇಂಧನ ಜಿಎಸ್‌ಟಿ ವ್ಯಾಪ್ತಿಯಲ್ಲಿ ಇಲ್ಲ. ಇವುಗಳನ್ನ ಜಿಎಸ್‌ಟಿ ವ್ಯಾಪ್ತಿಗೆ ಯಾವಗಿಂದ ತರಬೇಕು ಅನ್ನೋ ತೀರ್ಮಾನ ಕೈಗೊಳ್ಳುವ ಅಧಿಕಾರ ಜಿಎಸ್‌ಟಿ ಮಂಡಳಿಗೆ ಇದೆ. ಇದಕ್ಕೆ ರಾಜ್ಯಗಳು ಒಪ್ಪಿಕೊಂಡ ನಂತರ ಪೆಟ್ರೋಲಿಯಂ ಉತ್ಪನ್ನಗಳು ಕೂಡ ಜಿಎಸ್‌ಟಿ ವ್ಯಾಪ್ತಿಗೆ ಬರಲಿವೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply