ಲೋಕಸಭಾ ಚುನಾವಣೆ: ಸದ್ಯದಲ್ಲೆ‌ ಬಿಜೆಪಿಯ ಫಸ್ಟ್ ಲಿಸ್ಟ್‌ ರಿಲೀಸ್!

masthmagaa.com:

ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸ್ತಿರೋ ಆಡಳಿತಾರೂಢ ಬಿಜೆಪಿ ತನ್ನ ಅಭ್ಯರ್ಥಿಗಳ ಫಸ್ಟ್‌ ಲಿಸ್ಟ್‌ನ್ನ ಸದ್ಯದಲ್ಲೆ ರಿಲೀಸ್‌ ಮಾಡಲಿದೆ ಎನ್ನಲಾಗ್ತಿದೆ. ಈ ಸಂಬಂಧ ದಿಲ್ಲಿಯಲ್ಲಿ ಗುರುವಾರ ತಡರಾತ್ರಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸತತ 4 ಗಂಟೆಗಳ ಕಾಲ ಮಹತ್ವದ ಸಭೆ ನಡೆದಿದೆ. ಈ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನೆಡ್ಡಾ, ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ಯೋಗಿ ಆದಿತ್ಯನಾಥ್ ಸೇರಿದಂತೆ ಆಯಾ ರಾಜ್ಯಗಳ ಪ್ರಮುಖ ನಾಯಕರು ಭಾಗಿಯಾಗಿದ್ರು. ಫಸ್ಟ್‌ ಲಿಸ್ಟ್‌ನಲ್ಲಿ ಪ್ರಬಲ ಅಭ್ಯರ್ಥಿಗಳ ಹೆಸರನ್ನೆ ಪ್ರಕಟಿಸಲು ಚಿಂತನೆ ನಡೆಸಿದೆ. ಮೀಟಿಂಗ್‌ ಬಗ್ಗೆ ಬಿಜೆಪಿ ಕೂಡ ಸ್ಪಷ್ಟನೆ ನೀಡಿದೆ. ಇತ್ತ ಮಧ್ಯ ಪ್ರದೇಶದಲ್ಲಿ ಅಚ್ಚರಿ ಎಂಬಂತೆ ಮಾಜಿ ಸಿಎಂ ಶಿವರಾಜ್‌ ಸಿಂಗ್ ಚವ್ಹಾಣ್, ವಿದಿಶಾ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡ್ತಾರೆ ಎನ್ನಲಾಗ್ತಿದೆ. ಈ ಮೂಲಕ ಸಿಎಂ ಸ್ಥಾನದಿಂದ ಕೆಳಗಿಳಿದಿದ್ದ ಶಿವರಾಜ್‌ ಅವ್ರಿಗೆ, ಮೋದಿ ಸರ್ಕಾರ ತನ್ನ ಮುಂದಿನ ಕ್ಯಾಬಿನೆಟ್‌ನಲ್ಲಿ ಸ್ಥಾನ ನೀಡಲಿದೆ ಅನ್ನೊ ಮಾತುಗಳು ರಾಜಕೀಯ ಪಡಸಾಲೆಯಿಂದ ಕೇಳಿ ಬರ್ತಿವೆ.

-masthmagaa.com

Contact Us for Advertisement

Leave a Reply