masthmagaa.com:

ಮೊನ್ನೆಯಷ್ಟೇ ಮೂರು ಲಸಿಕೆ ತಯಾರಿಕಾ ಘಟಕಗಳಿಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಇವತ್ತು ಕೊರೋನಾ ಲಸಿಕೆಯ ಅಭಿವೃದ್ಧಿ ಮತ್ತು ಉತ್ಪಾದನೆಯಲ್ಲಿ ತೊಡಗಿರುವ 3 ತಂಡಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ರು. ಇದರಲ್ಲಿ ಪುಣೆಯ ಜೆನ್ನೋವಾ ಬಯೋಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್, ಹೈದ್ರಾಬಾದ್​ನ ಬಯೋಲಾಜಿಕಲ್ ಇ ಲಿಮಿಟೆಡ್ ಮತ್ತು ಹೈದ್ರಾಬಾದ್​ನ ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ ಲಿಮಿಟೆಡ್ ಸೇರಿವೆ.

ಈ ವೇಳೆ ಲಸಿಕೆ ಅಭಿವೃದ್ಧಿಯಲ್ಲಿ ವಿಜ್ಞಾನಿಗಳ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಕೊರೋನಾ ಮಟ್ಟಹಾಕಲು ಲಸಿಕೆಯ ಪರಿಹಾರ ಕಂಡುಹಿಡಿಯಿರಿ ಅಂತ ಸೂಚಿಸಿದ್ದಾರೆ. ಇದರ ಜೊತೆಗೆ ಲಸಿಕೆ ಅನುಮೋದನೆ ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ನಿಮ್ಮ ಬಳಿ ಏನಾದ್ರೂ ಸಲಹೆ, ಐಡಿಯಾಗಳಿದ್ರೆ ಹೇಳಿ ಅಂತ ಮನವಿ ಮಾಡಿದ್ದಾರೆ. ಅಲ್ಲದೆ ಲಸಿಕೆ ಬಗ್ಗೆ ತುಂಬಾ ಸಿಂಪಲ್ ಲಾಂಗ್ವೇಜ್​ನಲ್ಲಿ ಜನಸಾಮಾನ್ಯರಿಗೆ ತಿಳಿಸುವ ಪ್ರಯತ್ನ ಮಾಡಿ ಎಂದಿದ್ದಾರೆ.

-masthmagaa.com

Contact Us for Advertisement

Leave a Reply