ಭಾರತ-ಚೀನಾ ಕೊತಕೊತ: ಸರ್ವಪಕ್ಷ ಸಭೆ ಕರೆದ ಪ್ರಧಾನಿ ಮೋದಿ

masthmagaa.com:

ಭಾರತ-ಚೀನಾ ಗಡಿಯಲ್ಲಿನ ಪರಿಸ್ಥಿತಿ ಕುರಿತು ಚರ್ಚೆ ನಡೆಸಲು ಪ್ರಧಾನಿ ಮೋದಿ ಜೂನ್ 19ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಸಭೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಜೂನ್ 19ರ ಸಂಜೆ 5 ಗಂಟೆಗೆ ಸಭೆ ನಡೆಯಲಿದ್ದು, ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಲಡಾಖ್​ನ ಪೂರ್ವ ಭಾಗದ ಗಡಿ ನಿಯಂತ್ರಣ ರೇಖೆ ಬಳಿ ಮೊನ್ನೆ ಭಾರತ-ಚೀನಾ ಯೋಧರ ನಡುವೆ ಘರ್ಷಣೆ ನಡೆದಿತ್ತು. ಇದರಲ್ಲಿ ಭಾರತೀಯ ಸೇನೆಯ ಕರ್ನಲ್​ ಸೇರಿ ಒಟ್ಟು 20 ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಯೋಧರ ಸ್ಥಿತಿ ಗಂಭೀರವಾಗಿದೆ ಅಂತ ಮೂಲಗಳು ತಿಳಿಸಿವೆ. ಯೋಧರ ಬಲಿದಾನವನ್ನು ಈ ದೇಶ ಯಾವತ್ತೂ ಮರೆಯಲ್ಲ ಅಂತ ರಕ್ಷಣಾ ಸಚಿವ ರಾಜ್​ನಾಥ್ ಸಿಂಗ್ ಹೇಳಿದ್ದಾರೆ.

ಇನ್ನು ಘರ್ಷಣೆ ವೇಳೆ ಚೀನಾ ಸೈನಿಕರು ಕೂಡ ಮೃತಪಟ್ಟಿದ್ದಾರೆ ಅಂತ ಹೇಳಲಾಗ್ತಿದೆ. ಮೂಲಗಳ ಪ್ರಕಾರ 43 ಚೀನಾ ಸೈನಿಕರಿಗೆ ಹಾನಿಯಾಗಿದೆ. ಇದರ ಬೆನ್ನಲ್ಲೇ ಮಾತನಾಡಿರೋ ಚೀನಾ ವಿದೇಶಾಂಗ ಇಲಾಖೆ ವಕ್ತಾರ ಝಾವೊ ಲಿಜಿಯಾನ್, ನಾವು ಸಂಘರ್ಷವನ್ನ ನೋಡಲು ಬಯಸುವುದಿಲ್ಲ ಅಂತ ಹೇಳಿದ್ದಾರೆ.

-masthmagaa.com

 

Contact Us for Advertisement

Leave a Reply