ಏಷ್ಯಾದ ಅತಿದೊಡ್ಡ ಹೆಲಿಕಾಪ್ಟರ್‌ ಉತ್ಪಾದನಾ ಘಟಕ ಉದ್ಘಾಟಿಸಿದ ಮೋದಿ!

masthmagaa.com:

ಚುನಾವಣೆಗೆ ಇನ್ನೇನು ಕೆಲವು ತಿಂಗಳು ಬಾಕಿ ಇರುವಂತೆ ರಾಜ್ಯದಲ್ಲಿ ರ್ಯಾಲಿ, ಸಮಾವೇಶ, ಉದ್ಘಾಟನೆಗಳು ಜೋರಾಗ್ತಿವೆ. ರಾಜಕೀಯ ನಾಯಕರ ಭೇಟಿ ಕೂಡ ಜಾಸ್ತಿಯಾಗ್ತಿವೆ. ಇದೀಗ ರಾಜ್ಯಕ್ಕೆ ಆಗಮಿಸಿರೊ ಪ್ರಧಾನಿ ಮೋದಿಯವ್ರು ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ʻಭಾರತ ಇಂಧನ ಸಪ್ತಾಹ-2023ʼಕ್ಕೆ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ 30 ಸಾವಿರಕ್ಕೂ ಅಧಿಕ ಪ್ರತಿನಿಧಿಗಳು, ಹೂಡಿಕೆದಾರರು ಭಾಗಿಯಾಗಿದ್ದಾರೆ. ಬಳಿಕ ಕಾರ್ಯಕ್ರಮವನ್ನ ಉದ್ದೇಶಿಸಿ ಮಾತಾಡಿದ ಮೋದಿ, ಇಂಧನ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾರತ ಇಂದು ವಿಶ್ವದ ಅತ್ಯಂತ ಮುಂದುವರಿದ ದೇಶಗಳಲ್ಲಿ ಒಂದಾಗಿದೆ ಎಂದಿದ್ದಾರೆ. ಸಿಎನ್​ಜಿ ಸ್ಟೇಷನ್​ಗಳು 2014ಲ್ಲಿ 900 ಮಾತ್ರವೇ ಇತ್ತು. ಆದರೆ ಈಗ 5000ಕ್ಕೆ ಮುಟ್ಟಿವೆ. 2014ರಲ್ಲಿ 14 ಸಾವಿರ ಕಿಮೀ ಗ್ಯಾಸ್ ಪೈಪ್​ಲೈನ್ ಇತ್ತು. ಈಗ 20 ಸಾವಿರ ಕಿಮೀ ದಾಟಿದೆ. ಶೀಘ್ರದಲ್ಲಿಯೇ ಇದು 35 ಸಾವಿರ ಕಿಮೀ ದಾಟಲಿದೆ. ಗ್ರೀನ್ ಹೈಡ್ರೋಜನ್ ಕ್ಷೇತ್ರದಲ್ಲಿ ಭಾರತ ವಿಶ್ವದಲ್ಲಿಯೇ ಮುಂಚೂಣಿಯಲ್ಲಿದೆ. 2030ರ ಹೊತ್ತಿಗೆ 4 ಎಂಎಂಟಿ ಯಷ್ಟು ಗ್ರೀನ್ ಹೈಡ್ರೋಜನ್ ಉತ್ಪಾದಿಸುತ್ತೇವೆ. ಇದಕ್ಕಾಗಿ 8 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ಮಾಡಲಿದ್ದೇವೆ ಅಂತ ಮೋದಿ ಹೇಳಿದ್ದಾರೆ. ಬಳಿಕ ಪ್ರಧಾನಿ ಮೋದಿ ಅಲ್ಲಿಂದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್‌ಗೆ ಆಗಮಿಸಿದ್ರು. ಅಲ್ಲಿ ಅವರು HALನ ಹೆಲಿಕಾಪ್ಟರ್‌ ಉತ್ಪಾದನಾ ಘಟಕವನ್ನ ಉದ್ಘಾಟಿಸಿದ್ರು. ಈ ಘಟಕವನ್ನ 2,750 ಕೋಟಿ ರೂ. ವೆಚ್ಚದಲ್ಲಿ 615 ಎಕರೆ ಜಾಗದಲ್ಲಿ ನಿರ್ಮಾಣ ಮಾಡಲಾಗಿದೆ. ಏಷ್ಯಾದ ಅತಿದೊಡ್ಡ ಹೆಲಿಕಾಪ್ಟರ್‌ ಉತ್ಪಾದನಾ ಫ್ಯಾಕ್ಟರಿ ಇದಾಗಿದ್ದು, ವರ್ಷಕ್ಕೆ 30 ಹೆಲಿಕಾಪ್ಟರ್‌ ನಿರ್ಮಾಣ ಮಾಡುವ ಗುರಿ ಹೊಂದಿದೆ.

-masthmagaa.com

Contact Us for Advertisement

Leave a Reply