masthmagaa.com:

ದೆಹಲಿ: ಆಕ್ಸ್​ಫರ್ಡ್​​ ಲಸಿಕೆ ಮತ್ತು ಭಾರತ್ ಬಯೋಟೆಕ್​​​​ನ ಕೊರೋನಾ ಲಸಿಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ವಿಜ್ಞಾನಿಗಳು ಮತ್ತು ಸಂಶೋಧಕರಿಗೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಇದು ಕೊರೋನಾ ಸೋಂಕಿನ ವಿರುದ್ಧ ಭಾರತದ ಹೋರಾಟದಲ್ಲಿ ಒಂದು ನಿರ್ಣಾಯಕ ಕ್ಷಣವಾಗಿದೆ. ಸೀರಂ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್​​ನ ಕೊರೋನಾ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್ ನೀಡಿದೆ. ಇದು ಆರೋಗ್ಯಯುತ ಮತ್ತು ಕೊರೋನಾ ಮುಕ್ತ ಭಾರತ ಅಭಿಯಾನಕ್ಕೆ ಶಕ್ತಿ ನೀಡಲಿದೆ ಅಂತ ಹೇಳಿದ್ದಾರೆ.

ಜೊತೆಗೆ ಎರಡೂ ಲಸಿಕೆಗಳು ಮೇಡ್ ಇನ್ ಇಂಡಿಯಾ ಆಗಿರೋದು ಭಾರತೀಯರಿಗೆ ಹೆಮ್ಮೆಯ ವಿಚಾರ.. ಇದು ಆತ್ಮನಿರ್ಭರ್ ಭಾರತ ಕನಸು ನನಸು ಮಾಡಲು ನಮ್ಮ ವಿಜ್ಞಾನಿಗಳು ಹೊಂದಿರೋ ಇಚ್ಛಾಶಕ್ತಿಯನ್ನು ತೋರಿಸುತ್ತೆ. ಕೊರೋನಾ ವಿರುದ್ಧದ ಹೋರಾಟದಲ್ಲಿ ಕೆಲಸ ಮಾಡಿದ ವೈದ್ಯರು, ವೈದ್ಯಕೀಯ ಸಿಬ್ಬಂದಿ, ವಿಜ್ಞಾನಿಗಳು, ಪೊಲೀಸ್ ಸಿಬ್ಬಂದಿ, ಪೌರ ಕಾರ್ಮಿಕರು ಮತ್ತು ಎಲ್ಲಾ ಕೊರೋನಾ ವಾರಿಯರ್ಸ್ ಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ.. ಸಂಕಷ್ಟದ ಸಮಯದಲ್ಲಿ ದೇಶದ ಜನತೆಯ ಜೀವ ಉಳಿಸಿದ್ದಕ್ಕಾಗಿ ನಾವು ನಿಮಗೆ ಸದಾ ಆಭಾರಿಯಾಗಿರುತ್ತೇವೆ ಎಂದಿದ್ದಾರೆ.

-masthmagaa.com

Contact Us for Advertisement

Leave a Reply