ಮಳೆ, ಪ್ರವಾಹದ ಬಗ್ಗೆ ಸಿಎಂ ಜೊತೆ ಮಾತನಾಡಿದ ಪ್ರಧಾನಿ.. ಏನ್ ಹೇಳಿದ್ರು ಗೊತ್ತಾ?

masthmagaa.com:

ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿ ಕೇವಲ ಆಂಧ್ರಪ್ರದೇಶ, ತೆಲಂಗಾಣ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ರು ಅಂತ ಹೇಳಲಾಗ್ತಿತ್ತು. ಆದ್ರೀಗ ಪ್ರಧಾನಿ ಮೋದಿ ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪ ಜೊತೆಗೂ ದೂರವಾಣಿ ಮೂಲಕ ಮಾತನಾಡಿದ್ದು, ಕೇಂದ್ರದಿಂದ ಎಲ್ಲಾ ರೀತಿಯ ಸಹಾಯ ನೀಡುವುದಾಗಿ ಹೇಳಿದ್ದಾರೆ. ಈ ವಿಚಾರವನ್ನು ಸ್ವತಃ ಪ್ರಧಾನಿಯವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ.

‘ಕರ್ನಾಟಕದ ಹಲವು ಭಾಗಗಳಲ್ಲಿ ಸುರಿದಿರುವ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಬಗ್ಗೆ ಸಿಎಂ ಯಡಿಯೂರಪ್ಪಜೀ ಜೊತೆ ಮಾತನಾಡಿದ್ದೀನಿ. ಪ್ರವಾಹಕ್ಕೆ ತುತ್ತಾಗಿರುವ ರಾಜ್ಯದ ಜನತೆ ಜೊತೆಗೆ ನಾವು ಒಗ್ಗಟ್ಟಾಗಿ ನಿಲ್ಲುತ್ತೇವೆ. ಅಲ್ಲದೆ ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣೆ ಮತ್ತು ಈಗಾಗಲೇ ಜಾರಿಯಲ್ಲಿರುವ ಪರಿಹಾರ ಕಾರ್ಯಗಳಿಗೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಅನ್ನೋ ಭರವಸೆ ನೀಡಿದ್ದೇನೆ’ ಅಂತ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಕೇವಲ ಕರ್ನಾಟಕ ಮಾತ್ರವಲ್ಲ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಜೊತೆಗೂ ಪ್ರಧಾನಿ ದೂರವಾಣಿ ಮೂಲಕ ಮಾತನಾಡಿದ್ದಾರೆ. ಸದ್ಯ ಮಹಾರಾಷ್ಟ್ರದಲ್ಲಿ ಮಳೆ ಆರ್ಭಟ ಕಮ್ಮಿಯಾಗಿದ್ರೂ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

-masthmagaa.com

Contact Us for Advertisement

Leave a Reply