ಪೆಗಾಸಸ್​ ತನಿಖೆಗೆ ಸಮಿತಿ ರಚಿಸಿ ಆದೇಶಿಸಿದ ಸುಪ್ರೀಂಕೋರ್ಟ್​​

masthmagaa.com:

ಇಸ್ರೇಲ್ ಮೂಲದ ಪೆಗಾಸಸ್ ಸ್ಪೈವೇರ್ ಬಳಸಿ ರಾಜಕಾರಣಿಗಳು, ಪತ್ರಕರ್ತರು ಮತ್ತು ಹೋರಾಟಗಾರರ ಗೂಢಚರ್ಯೆ ಮಾಡಿರೋ ಆರೋಪಕ್ಕೆ ಸಂಬಂಧಿಸಿದಂತೆ ಇವತ್ತು ಸುಪ್ರೀಂಕೋರ್ಟ್​​ ವಿಚಾರಣೆ ನಡೆಸಿದೆ. 3 ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್​, ಈ ವಿಚಾರ ಮೂಲಭೂತ ಹಕ್ಕಿಗೆ ಸಂಬಂಧಿಸಿದೆ. ಯಾವುದೇ ವ್ಯಕ್ತಿಯ ಮೇಲೆ ಬೇಹುಗಾರಿಕೆ ನಡೆಸಲು ಅನುಮತಿಸಲು ಸಾಧ್ಯವಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಅಸ್ಪಷ್ಟವಾಗಿಯೇ ನಿರಾಕರಿಸುತ್ತಾ ಬಂದಿದೆ. ಆದ್ರೆ ಅದು ಸಾಕಾಗೋದಿಲ್ಲ. ಈ ಬಗ್ಗೆ ತನಿಖೆ ನಡೆಯಬೇಕು ಅಂತ ಹೇಳಿದೆ. ಜೊತೆಗೆ ನಿವೃತ್ತ ನ್ಯಾಯಮೂರ್ತಿ ಆರ್ ವಿ ರವೀಂದ್ರನ್ ನೇತೃತ್ವದ ಸಮಿತಿಯನ್ನು ರಚಿಸಿ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರೋ ಕಾಂಗ್ರೆಸ್​​, ಸುಪ್ರೀಂಕೋರ್ಟ್​ ತೀರ್ಪು ಸ್ವಾಗತಾರ್ಹವಾಗಿದೆ. ಈ ಮೂಲಕ ಗಮನ ಬೇರೆ ಕಡೆಗೆ ಸೆಳೆಯೋ, ರಾಷ್ಟ್ರೀಯ ಭದ್ರತೆಯ ನೆಪ ನೀಡಿ ನುಣುಚಿಕೊಳ್ಳುವ ಕೇಂದ್ರ ಸರ್ಕಾರದ ಪ್ರಯತ್ನವನ್ನು ಸುಪ್ರೀಂಕೋರ್ಟ್​ ತಿರಸ್ಕರಿಸಿದೆ ಅಂತ ಹೇಳಿದೆ.

-masthmagaa.com

Contact Us for Advertisement

Leave a Reply