ದೇಶವನ್ನು ಉದ್ದೇಶಿಸಿ ಇಂದು ರಾತ್ರಿ 8 ಗಂಟೆಗೆ ಮೋದಿ ಭಾಷಣ..!

masthmagaa.com:

ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಿನ್ನೆಯಷ್ಟೇ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ 6 ಗಂಟೆಗಳ ಮ್ಯಾರಥಾನ್ ಮೀಟಿಂಗ್ ನಡೆಸಿದ್ರು. ಈ ವೇಳೆ ಲಾಕ್​ಡೌನ್ ವಿಸ್ತರಣೆಯ ಸಾಧ್ಯಾಸಾಧ್ಯತೆ ಹಾಗೂ ಮತ್ತಿತರ ವಿಚಾರಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದರು. ಇದರ ಬೆನ್ನಲ್ಲೇ ಇವತ್ತು ಪ್ರಧಾನಿ ಮೋದಿ ಭಾಷಣ ಮಾಡುತ್ತಿರೋದು ಸಾಕಷ್ಟು ಕುತೂಹಲ ಕೆರಳಿಸಿದೆ.

ದೇಶದಲ್ಲಿ ಹೇರಿರುವ 3ನೇ ಹಂತದ ಲಾಕ್​ಡೌನ್​ ಅಂತ್ಯಗೊಳ್ಳಲು ಇನ್ನು ಕೆಲವೇ ದಿನಗಳು ಬಾಕಿ ಇದೆ. ಹೀಗಾಗಿ ಲಾಕ್​ಡೌನ್ ಮುಂದುವರಿಯುತ್ತೋ ಅಥವಾ ಇಲ್ವೋ ಅನ್ನೋದು 130 ಕೋಟಿ ಜನರ ಪ್ರಶ್ನೆಯಾಗಿದೆ. ಇದರ ಬಗ್ಗೆ ಪ್ರಧಾನಿ ಮೋದಿ ಇಂದು ರಾತ್ರಿ ಸ್ಪಷ್ಟನೆ ಕೊಡುವ ಸಾಧ್ಯತೆ ಇದೆ.

-masthmagaa.com

Contact Us for Advertisement

Leave a Reply