ಪಾಕಿಸ್ತಾನಕ್ಕೆ ತೆರಳಲಿದ್ದಾರೆ `ನಮೋ’..! ಯಾಕೆ ಗೊತ್ತಾ..?

ಸಿಖ್ ಸಮುದಾಯದ ಬಹುನಿರೀಕ್ಷಿತ ಪಾಕಿಸ್ತಾನದ ಕರ್ತಾರ್ ಪುರ್ ಕಾರಿಡಾರ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ನವೆಂಬರ್ 8ರಂದು ಉದ್ಘಾಟಿಸಲಿದ್ದಾರೆ. ಈ ಕುರಿತು ಕೇಂದ್ರ ಸಚಿವೆ ಹರ್ ಸಿಮ್ರಾತ್ ಕೌರ್ ಬಾದಲ್ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಗುರು ನಾನಕ್ ದೇವ್ ಅವರ ಆಶೀರ್ವಾದದಿಂದ ನವೆಂಬರ್ 8 ರಂದು ಕರ್ತಾರ್ ಪುರ್ ಕಾರಿಡಾರ್ ಉದ್ಘಾಟಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಇತಿಹಾಸ ಸೃಷ್ಟಿಸಲಿದ್ದಾರೆ. 72 ವರ್ಷಗಳ ಕಾಲ ಕಾಂಗ್ರೆಸ್‍ಗೆ ಮಾಡಲು ಸಾಧ್ಯವಾಗದ್ದನ್ನು ಪ್ರಧಾನಿ ಮೋದಿಯವರು ಮಾಡಿ ತೋರಿಸಿದ್ದಾರೆ ಎಂದು ಹಾಡಿ ಹೊಗಳಿದ್ದಾರೆ.

ಈ ಹಿಂದೆ ಪಾಕಿಸ್ತಾನ ಕೂಡ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಪ್ರಧಾನಿ ಮೋದಿಯವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿತ್ತು. ಆದ್ರೆ ಇಬ್ಬರೂ ಕಾರ್ಯಕ್ರಮಕ್ಕೆ ತೆರಳಲು ನಿರಾಕರಿಸಿದ್ದರು. ಆದ್ರೆ ಇದೀಗ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದು, ಪ್ರಧಾನಿ ಮೋದಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇಬ್ಬರೂ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ.

ಕರ್ತಾರ್ ಪುರ್ ಕಾರಿಡಾರ್ ಮೂಲಕ ಪಂಜಾಬ್‍ನ ಗುರುದಾಸ್ ಪುರದಿಂದ ಪಾಕಿಸ್ತಾನದಲ್ಲಿರುವ ಸಿಖ್ ತೀರ್ಥಕ್ಷೇತ್ರ ಕರ್ತಾರ್ ಪುರ್ ಸಾಹಿಬ್‍ಗೆ ಸಂಪರ್ಕ ಕಲ್ಪಿಸಲಾಗಿದೆ.

Contact Us for Advertisement

Leave a Reply